ಹಾವೇರಿ:- ರಸ್ತೆ ಅಪಘಾತದಲ್ಲಿ ಹೊಸ ಬೈಕ್ ಖರೀದಿಸಿ ಮನೆಗೆ ಹೋಗುತ್ತಿದ್ದ ಸವಾರ ದುರ್ಮರಣ ಹೊಂದಿರುವ ಘಟನೆ ತಾಲೂಕಿನ ಗೌರಾಪುರ ಗ್ರಾಮದಲ್ಲಿ ಜರುಗಿದೆ. 35 ವರ್ಷದ ನಾಗರಾಜ್ ಮೃತ ಬೈಕ್ ಸವಾರ ಎನ್ನಲಾಗಿದೆ.
ಚನ್ನಪಟ್ಟಣ ಸ್ಟೇಡಿಯಂ ನಿರ್ಮಾಣಕ್ಕೆ ಅಗತ್ಯ ನೆರವು: ಡಿಸಿಎಂ ಪ್ರಸ್ತಾವನೆಗೆ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕ ಸ್ಪಂದನೆ
ನಾಗರಾಜ್ ಎಂಬಾತ ತಾನು ಖರೀದಿಸಿದ ಹೊಸ ಬೈಕ್ ಅನ್ನು ಮನೆಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ನಲ್ಲಿದ್ದ ಇನ್ನೋರ್ವ ವ್ಯಕ್ತಿಗೂ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.