ಕಲಬುರಗಿ :- ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಜರುಗಿದೆ.
ಮಹೇಶ್ (32), ಪ್ರೇಮ್ ಕುಮಾರ್ (25) ಮತ್ತು ಅನ್ನದಾನಯ್ಯ(25) ಮೃತರು. ನಿತ್ಯಾನಂದ ಗಾಯಗೊಂಡವರು. ಮದುವೆ ಆಮಂತ್ರಣ ಪತ್ರಿಕೆ ಕೊಡಲು ಕಾರಿನಲ್ಲಿ ಸೇಡಂ ಕಡೆಯಿಂದ ಗುಂಡಗುರ್ತಿ ಕಡೆಗೆ ಹೊರಟಿರುವಾಗ ಅಪಘಾತ ಸಂಭವಿಸಿದೆ. ಘಟನೆ ಸಂಬಂಧ ಮಳಖೇಡ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.