ಐಪಿಎಲ್ 2025 ರಲ್ಲಿ ಇಂದು ಡಬಲ್ ಹೆಡರ್ ಪಂದ್ಯ ನಡೆಯಲಿದೆ. ದಿನದ ಮೊದಲ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಆರ್ಸಿಬಿ ನಾಯಕ ರಜತ್ ಪಾಟಿದರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು. ರಾಜಸ್ಥಾನ್ ಮೊದಲು ಬ್ಯಾಟಿಂಗ್ ಮಾಡಿದ್ದು,
20ನೇ ಓವರ್ನ ಕೊನೆಯ ಎಸೆತದಲ್ಲಿ ನಿತೀಶ್ ರಾಣಾ ಅದ್ಭುತ ಬೌಂಡರಿ ಬಾರಿಸಿದರು. ಈ ಓವರ್ನಲ್ಲಿ ರಾಜಸ್ಥಾನ್ 11 ರನ್ ಗಳಿಸಿತು. ಇದರೊಂದಿಗೆ ರಾಜಸ್ಥಾನ ಮೊದಲ ಇನ್ನಿಂಗ್ಸ್ನಲ್ಲಿ 173 ರನ್ ಗಳಿಸಿದೆ.
ಕೊನೆಯಲ್ಲಿ ಧ್ರುವ್ ಜುರೆಲ್ ಸ್ಫೋಟಕ ಬ್ಯಾಟಿಂಗ್ ಮಾಡಿದರು. ಅವರು 23 ಎಸೆತಗಳಲ್ಲಿ 35 ರನ್ ಗಳಿಸಿದರು. ಅವರ ಇನ್ನಿಂಗ್ಸ್ ಆಧಾರದ ಮೇಲೆ ರಾಜಸ್ಥಾನ್ ಬೆಂಗಳೂರು ತಂಡಕ್ಕೆ 174 ರನ್ಗಳ ಗುರಿಯನ್ನು ನೀಡಿದೆ.
ಬ್ಯಾಟಿಂಗ್ ಆರಂಭಿಸಿದ ರಾಜಸ್ಥಾನ್ ರಾಯಲ್ಸ್ ಪವರ್ ಪ್ಲೇನಲ್ಲಿ 45 ರನ್ಗಳಿಸಿದರು. ಪವರ್ ಪ್ಲೇನಲ್ಲಿ ರನ್ಗಳಿಸಲು ಪರದಾಡಿದ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಕೃನಾಲ್ ಪಾಂಡ್ಯ ಬೌಲಿಂಗ್ನಲ್ಲಿ ಸ್ಟಂಪ್ ಆದರು. ಅವರು 19 ಎಸೆತಗಳಲ್ಲಿ 15 ರನ್ಗಳಿಸಿ ಔಟ್ ಆದರು.
ಆದರೆ ಯಶಸ್ವಿ ಜೈಸ್ವಾಲ್ 47 ಎಸೆತಗಳಲ್ಲಿ 10 ಬೌಂಡರಿ , 2 ಸಿಕ್ಸರ್ ಸಹಿತ 75 ರನ್ಗಳಿಸಿ ತಂಡಕ್ಕೆ ನೆರವಾದರು. ಇವರು 2ನೇ ವಿಕೆಟ್ ಜೊತೆಯಾಟದಲ್ಲಿ ಪರಾಗ್ ಜೊತೆ 56 ರನ್ಗಳ ಜೊತೆಯಾಟ ನಡೆಸಿದರು. ಪರಾಗ್ 22 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಹಿತ 30 ರನ್ಗಳಿಸಿ ದಯಾಳ್ಗೆ ವಿಕೆಟ್ ಒಪ್ಪಿಸಿದರು.