ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ 6ನೇ ಪಂದ್ಯವನ್ನು ಆಡುತ್ತಿದೆ. ಇದರಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸುತ್ತಿದ್ದು, ರಾಜಸ್ಥಾನದ ತವರು ಮೈದಾನವಾದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
ಎರಡೂ ತಂಡಗಳು ಗೆಲುವಿನ ಹಾದಿಗೆ ಮರಳಲು ಪ್ರಯತ್ನಿಸಲಿವೆ. ಕಳೆದ ಪಂದ್ಯದಲ್ಲಿ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರು ವಿಕೆಟ್ಗಳಿಂದ ಸೋತಿತ್ತು. ಇತ್ತ ರಾಜಸ್ಥಾನ ತಂಡವನ್ನು ಗುಜರಾತ್ ಟೈಟಾನ್ಸ್ 58 ರನ್ಗಳಿಂದ ಸೋಲಿಸಿತು. ಮತ್ತೊಂದೆಡೆ, ರಾಜಸ್ಥಾನ್ ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ 7 ನೇ ಸ್ಥಾನದಲ್ಲಿದ್ದರೆ, ಆರ್ಸಿಬಿ 5 ನೇ ಸ್ಥಾನದಲ್ಲಿದೆ.
ಸದ್ಯ ಟಾಸ್ ಗೆದ್ದ ಆರ್ಸಿಬಿ ನಾಯಕ ರಜತ್ ಪಾಟಿದರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ರಾಜಸ್ಥಾನ್ ಮೊದಲು ಬ್ಯಾಟಿಂಗ್ ಮಾಡಲಿದೆ.
ಉಭಯ ತಂಡಗಳು
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಧ್ರುವ್ ಜುರೆಲ್, ರಿಯಾನ್ ಪರಾಗ್, ಶಿಮ್ರೋನ್ ಹೆಟ್ಮೆಯರ್, ಸಂದೀಪ್ ಶರ್ಮಾ, ಜೋಫ್ರಾ ಆರ್ಚರ್, ವನಿಂದು ಹಸರಂಗ, ಮಹೇಶ್ ತೀಕ್ಷಣ, ಆಕಾಶ್ ಮಧ್ವಲ್, ಕುಮಾರ್ ಕಾರ್ತಿಕೇಯ, ತುಷಾರ್ ದೇಶಪಾಂಡೆ, ನಿತೀಶ್ ರಾಣಾ, ಫಜಲ್ಹಕ್ ಫಾರೂಕಿ, ಶುಭಂ ದುಬೆ, ಯುಧ್ವೀರ್ ಚರಕ್, ವೈಭವ್ ಸೂರ್ಯವಂಶಿ, ಕುನಾಲ್ ರಾಥೋಡ್, ಕ್ವೆನಾ ಮಫಕಾ, ಅಶೋಕ್ ಶರ್ಮಾ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್ಸ್ಟೋನ್, ಜೋಶ್ ಹೇಜಲ್ವುಡ್, ರಸಿಖ್ ದಾರ್, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ನುವಾನ್ ತುಷಾರ, ಜೇಕಬ್ ಬೆಥೆಲ್, ಮನೋಜ್ ಭಾಂಡಗೆ, ದೇವದತ್ತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರಾ, ಲುಂಗಿ ಎನ್ಗಿಡಿ, ಅಭಿನಂದನ್ ಸಿಂಗ್, ಮೋಹಿತ್ ರಾಠಿ.