ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ಭೀಕರ ದಾಳಿ ವಿಡಿಯೋಗಳನ್ನು ಕಂಡು ಇಡೀ ದೇಶವೇ ಬೆಚ್ಚಿ ಬಿದ್ದಿದೆ. ನೀನು ಹಿಂದೂನಾ? ಅಲ್ಲ ಮುಸ್ಲಿಂನಾ ಅಂತ ಕೇಳಿ ತಲೆಗೆ ಗುಂಡು ಹಾರಿಸಿ ವಿಕೃತಿ ಮೆರೆದಿದ್ದಾರೆ. ಅಷ್ಟೇ ಅಲ್ಲದೇ ಈ ದಾಳಿಯಲ್ಲಿ 26 ಮಂದಿ ಮೃತಪಟ್ಟ ಬೆನ್ನಲ್ಲೇ ರಾಜ್ಯ ಪ್ರವಾಸಿ ತಾಣಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ.
ಈ ದಾಳಿ ನಡೆಸಿದ ಶಂಕಿತ ಉಗ್ರರ ರೇಖಾಚಿತ್ರಗಳನ್ನು ಜಮ್ಮು ಕಾಶ್ಮೀರ ಪೊಲೀಸರು ಹಂಚಿಕೊಂಡಿದ್ದು, ಅವರ ಬಗ್ಗೆ ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ.
ಫ್ರಿಡ್ಜ್ ನಲ್ಲಿ ಈ ಹಣ್ಣುಗಳನ್ನು ಇಡ್ತಿದ್ದೀರಾ!? ಇದರಿಂದ ದೇಹಕ್ಕಾಗುವ ಹಾನಿ ಎಷ್ಟು ಗೊತ್ತಾ!?
ಸಾರ್ವಜನಿಕರಿಗೆ ಮನವಿ ಮಾಡಿರುವ ಪೊಲೀಸರು, ಮಾಹಿತಿದಾರರ, ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಯಾವುದೇ ಸಂಬಂಧಿತ ಮಾಹಿತಿಯನ್ನು ಹೊಂದಿರುವ ನಾಗರಿಕರು ಅನಂತ್‌ನಾಗ್‌ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ಅಥವಾ ಪೊಲೀಸ್ ನಿಯಂತ್ರಣ ಕೊಠಡಿ (PCR) ಅವರನ್ನು ನೇರವಾಗಿ ಈ ಕೆಳಗಿನ ಸಂಪರ್ಕ ಸಂಖ್ಯೆಗಳಲ್ಲಿ ಸಂಪರ್ಕಿಸಲು ಕೋರಲಾಗಿದೆ:
ಎಸ್ಎಸ್ಪಿ ಅನಂತನಾಗ್ : 9596777666, ಪಿಸಿಆರ್ ಅನಂತನಾಗ್ : 9596777669 ಇ– ಮೇಲ್ : [email protected] ಮಾಹಿತಿ ನೀಡಬಹುದು. ಕಾಶ್ಮೀರ ಕಣಿವೆಯಲ್ಲಿ ಸಾರ್ವಜನಿಕರ ಸುರಕ್ಷತೆಗೆ ಯಾವುದೇ ಅಡಚಣೆ ಉಂಟಾಗದಂತೆ ತಡೆಯಲು ಕಾನೂನು ಜಾರಿ ಸಂಸ್ಥೆಗಳು ಪ್ರಯತ್ನಗಳನ್ನು ತೀವ್ರಗೊಳಿಸಿವೆ.