ಬೆಳಗಾವಿಯ ಸೊಸೆ ಕರ್ನಲ್ ಸೋಫಿಯಾ ಖುರೇಷಿ ಕುರಿತು ಸುಳ್ಳು ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದೆ. ಸೋಫಿಯಾ ಪತಿ ಮನೆ ಮೇಲೆ RSS ಅಟ್ಯಾಕ್ ಮಾಡಿದೆ ಎಂದು ಅನಿಸ್ ಉದ್ದೀನ್ ಎಂಬಾತನಿಂದ ಪೋಸ್ಟ್ ಮಾಡಲಾಗಿತ್ತು. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಅನೀಸ್ ಉದ್ದೀನ್ ವಿರುದ್ಧ ಸಿಇಎನ್ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಬೇಸಿಗೆಯಲ್ಲಿ ಮೊಟ್ಟೆ ತಿಂದ್ರೆ ನಿಮಗೆ ಅನಾರೋಗ್ಯ ಕಾಡುತ್ತೆ..! ಇದನ್ನು ನೀವೂ ನಂಬಲೆಬೇಕು
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ಕರ್ನಲ್ ಸೋಫಿಯಾ ಖುರೇಷಿ ಅವರ ಪತಿ ತಾಜುದ್ದೀನ್ ಮನೆ ಇದ್ದು, ಈ ಮನೆ ಮೇಲೆ ಆರ್ಎಸ್ಎಸ್ ಅಟ್ಯಾಕ್ ಮಾಡಿದೆ ಎಂದು ಅನಿಸ್ ಉದ್ದೀನ್ ಎಂಬಾತ ಮನೆ ಧ್ವಂಸದ ಯಾವುದೋ ಹಳೇ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ.
ಅನಿಸ್ ಉದ್ದೀನ್ ಕೆನಡಾದಲ್ಲಿ ಕುಳಿತು ಈ ಸುಳ್ಳು ಪೋಸ್ಟ್ ಹಾಕಿದ್ದ. ಈ ಸುದ್ದಿ ಭಾರೀ ಸದ್ದು ಮಾಡುತ್ತಿದ್ದಂತೆಯೇ ಖುರೇಷಿ ಪತಿಯ ಕೊಣ್ಣೂರು ಗ್ರಾಮಕ್ಕೆ ಎಸ್ಪಿ ಭೀಮಾಶಂಕರ್ ಗುಳೇದ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದರು. ಇದು ಇದು ಸಂಪೂರ್ಣ ಸುಳ್ಳು ಸುದ್ದಿ ಎಂದು ಎಸ್ಪಿ ಸ್ಪಷ್ಟನೆ ನೀಡಿದ್ದರು.