ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಎರಡು ವರ್ಷಗಳ ಆಡಳಿತ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ವಿಜಯನಗರದಲ್ಲಿ ಬೃಹತ್ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನಾಳೆಗೆ ಎರಡು ವರ್ಷ ಯಶಸ್ವಿಯಾಗಿ ಪೂರೈಸುತ್ತದೆ.
ಈ ಹಿನ್ನೆಲೆ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಜೊತೆಗೆ ವಿವಿಧ ಸವಲತ್ತುಗಳ ವಿತರಣಾ ಸಮಾವೇಶವೂ ನಡೆಯಲಿದೆ. ಎಲ್ಲಾ ಜಿಲ್ಲೆಗಳಿಂದ ವಿವಿಧ ಯೋಜನೆಗಳ ಫಲಾನುಭವಿಗಳು ವಿಜಯನಗರದತ್ತ ಮುಖ ಮಾಡಿದ್ದಾರೆ.
ಕಿಡ್ನಿ ಸ್ಟೋನ್ ನೋವಿಲ್ಲದೇ ಕರಗಿ ಹೋಗ್ಬೇಕಾ!? ಹಾಗಿದ್ರೆ ಖಾಲಿ ಹೊಟ್ಟೆಯಲ್ಲಿ ಈ ಜ್ಯೂಸ್ ಕುಡಿರಿ, ರಿಸಲ್ಟ್ ಗ್ಯಾರಂಟಿ!
ರಾಜ್ಯದ ಬಹುತೇಕ ಜಿಲ್ಲೆಗಳಿಂದ ಕಾರ್ಯಕರ್ತರು, ಜನರು ಹೊಸಪೇಟೆಯತ್ತ ಸಾಗಲಿದ್ದು, ಸಮಾವೇಶ ಮಹತ್ವ ಪಡೆದಿದೆ. ಈ ಭಾಗದಲ್ಲಿ ಹೆಚ್ಚು ಬಿಸಿಲು ಇರುವುದರಿಂದ ನೆರಳಿನ ವ್ಯವಸ್ಥೆ ಕಲ್ಪಿಸಲು ಸುಸಜ್ಜಿತ ಜರ್ಮನ್ ಟೆಂಟ್ ನಿರ್ಮಿಸಲಾಗುತ್ತಿದೆ. ಬೆಂಗಳೂರಿನ ಉಡುಪಾಸ್ ಸಂಸ್ಥೆಯವರು ವೇದಿಕೆ ನಿರ್ಮಿಸುತ್ತಿದ್ದಾರೆ.
ಪ್ರಧಾನ ವೇದಿಕೆ ಜತೆಗೆ ಇನ್ನೂ ಎರಡು ಕಿರು ವೇದಿಕೆಗಳನ್ನು ನಿರ್ಮಿಸಲಾಗುತ್ತಿದೆ. 200 ಅಡಿ ಅಗಲ, 70 ಅಡಿ ಉದ್ದದ ಪ್ರಧಾನ ವೇದಿಕೆಯಲ್ಲಿ 300 ಗಣ್ಯರಿಗೆ ಆಸನದ ವ್ಯವಸ್ಥೆ ಮಾಡಲಾಗುತ್ತಿದೆ. ಮೊದಲ ಕಿರು ವೇದಿಕೆಯಲ್ಲಿ 50 ಮಾಜಿ ಸಚಿವರಿಗೆ ವೇದಿಕೆ ಕಲ್ಪಿಸಲಾಗುತ್ತಿದೆ. ಇನ್ನೊಂದರಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷರು ಹಾಗೂ ಪಕ್ಷದ ಪ್ರಮುಖ 50 ಗಣ್ಯರಿಗೆ ಆಸನದ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಇನ್ನೂ ಕಾಂಗ್ರೆಸ್ ಸರ್ಕಾರ ಎರಡು ವರ್ಷದ ಆಡಳಿತದಲ್ಲಿ ಜಾರಿಗೊಳಿಸಿದ ಜನೋಪಯೋಗಿ ಪ್ರಮುಖ ಯೋಜನೆಗಳು ಯಾವುವು ಎಂದು ಇಲ್ಲಿ ತಿಳಿಯೋಣ
- ಪಂಚ ಗ್ಯಾರಂಟಿ ಯೋಜನೆಗಳ ಜಾರಿ
- ನೋಂದಣಿಗೆ ಇ-ಖಾತಾ ಕಡ್ಡಾಯ
- ಖಾತಾ ಇಲ್ಲದವರಿಗೆ ಇ-ಖಾತಾ ಅಭಿಯಾನ
- ಕಂದಾಯ ಇಲಾಖೆಯಿಂದ ಹಕ್ಕುಪತ್ರ ವಿತರಣೆ
- ಪೋಡಿ ದುರಸ್ತಿ ಅಭಿಯಾನ
- ಭೂಸುರಕ್ಷಾ ಯೋಜನೆ ಜಾರಿ
- ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಮೀಸಲಾತಿ
- ಕಾವೇರಿ 5ನೇ ಹಂತ ಯೋಜನೆ ಲೋಕಾರ್ಪಣೆ
- ಎತ್ತಿನ ಹೊಳೆ ಯೋಜನೆ ಮೊದಲ ಹಂತ ಲೋಕಾರ್ಪಣೆ
- ಎಸ್ಸಿ ಒಳ ಮೀಸಲಾತಿ ಸಮೀಕ್ಷೆ