ಚಾಮರಾಜನಗರ: ಗಡಿಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿರುವ ಸಾಲೂರು ಬೃಹ್ಮನ್ಮಠದ ಹಿರಿಯ ಮಠಾಧಿಪತಿ ಗುರುಸ್ವಾಮಿ ಇಂದು ಮುಂಜಾನೆ 5 ಗಂಟೆಗೆ ಲಿಂಗೈಕ್ಯರಾಗಿದ್ದಾರೆ.
1995ರಿಂದಲೂ ಶ್ರೀಕ್ಷೇತ್ರದಲ್ಲಿ ಮಠಾಧಿಪತಿಯಾಗಿ ಸೇವೆ ಸಲ್ಲಿಸುತ್ತಿದ್ದ ಗುರುಸ್ವಾಮಿ, ಎಲ್ಲಾ ಸಮುದಾಯದವರ ಪ್ರೀತಿಗೆ ಪಾತ್ರರಾಗಿದ್ದರು. ಧಾರ್ಮಿಕ ಹಾಗೂ ಸಮಾಜ ಸೇವೆಯ ಕ್ಷೇತ್ರದಲ್ಲಿ ಅವರ ಕೊಡುಗೆ ಅಪಾರವಾಗಿತ್ತು.
ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಹಿಂದೆಯೇ ಅವರು ತಮ್ಮ ಉತ್ತರಾಧಿಕಾರಿಯಾಗಿ ಶಾಂತ ಮಲ್ಲಿಕಾರ್ಜುನಸ್ವಾಮಿ ಅವರನ್ನು ನೇಮಿಸಿದ್ದರು.
“ಕೆಡಿ” ಹೀರೋಯಿನ್ ರೀಷ್ಮಾ ನಾಣಯ್ಯ ಸಹೋದರಿ ಈಗ ಭಾಸ್ಕರ್ ರಾವ್ ಸೊಸೆ!
ಗುರುಸ್ವಾಮಿಗಳ ನಿಧನದಿಂದ ಭಕ್ತರಲ್ಲಿ ಆಘಾತ ಉಂಟಾಗಿದ್ದು ಸಾಲೂರು ಮಠದ ಭಕ್ತರು ಮತ್ತು ಶಿಷ್ಯವೃಂದ ತೀವ್ರ ದುಃಖ ವ್ಯಕ್ತಪಡಿಸಿದೆ.