ಸಮಂತಾ ರುತ್ ಪ್ರಭು ನಿರ್ದೇಶಕ ರಾಜ್ ನಿಡಿಮೋರು ಜೊತೆಗೆ ಡೇಟಿಂಗ್ ನಲ್ಲಿದ್ದಾರೆ ಅನ್ನೋ ವದಂತಿಗಳ ನಡುವೆ ತಿರುಪತಿಯಲ್ಲಿ ಇಬ್ಬರು ಒಟ್ಟಾಗಿ ಕಾಣಸಿಕೊಂಡಿದ್ದಾರೆ. ಶನಿವಾರ ನಿರ್ದೇಶಕ ರಾಜ್ ನಿಡಿಮೋರು, ನಟಿ ಸಮಂತ್ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಕಾಣಿಸಿಕೊಂಡಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.
ಡಿವೋರ್ಸ್ ನಂತರ ಸಮಂತಾ ನಿಡಿಮೋರು ಜೊತೆಗೆ ಡೇಟಿಂಗ್ ನಲ್ಲಿದ್ದಾರೆ ಅನ್ನೋ ಸುದ್ದಿ ಸಖತ್ ಸದ್ದು ಮಾಡಿತ್ತು. ಸದ್ಯ ವೆಬ್ ಸಿರೀಸ್, ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸಮಂತಾ ನಿಡಿಮೋರು ಜೊತೆಗೆ ಸಾಂಪ್ರದಾಯಿಕ ಉಡುಗೆಯಲ್ಲಿ ತಿರುಪತಿ ತಿಮ್ಮಪ್ಪನ ಸನ್ನಧಿಗೆ ಭೇಟಿ ನೀಡಿ, ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸದ್ಯ ಇಬ್ಬರು ಒಟ್ಟಿಗೆ ದೇವಸ್ಥಾನದೊಳಗೆ ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ.
ಸಾಂಪ್ರದಾಯಿಕ ದಿರಿಸಿನಲ್ಲಿ ದೇವಾಲಯಕ್ಕೆ ಆಗಮಿಸಿದ ಇವರಿಬ್ಬರೂ ದೇವರ ಆಶೀರ್ವಾದ ಪಡೆದಿದ್ದಾರೆ. ಸಮಂತಾ ಆಗಾಗ್ಗೆ ದೇವಾಲಯಕ್ಕೆ ಭೇಟಿ ನೀಡುತ್ತಿರುತ್ತಾರೆ. ಸಮಂತಾ ಗುಲಾಬಿ ಸಲ್ವಾರ್ ಸೂಟ್ ನಲ್ಲಿದ್ದರೆ, ರಾಜ್ ನಿಡಿಮೋರು ನೀಲಿ ಶರ್ಟ್ ಮತ್ತು ಬಿಳಿ ಪಂಚೆಯಲ್ಲಿ ಕಾಣಿಸಿಕೊಂಡಿದ್ದಾರೆ. ವಿಡಿಯೋವೊಂದರಲ್ಲಿ ಇಬ್ಬರೂ ಒಟ್ಟಿಗೆ ದೇವಸ್ಥಾನವನ್ನು ಪ್ರವೇಶಿಸುತ್ತಾರೆ.
ಸಮಂತಾ ಅಥವಾ ರಾಜ್ ನಿಡಿಮೋರು ಅವರ ತಮ್ಮ ಡೇಟಿಂಗ್ ವದಂತಿಗಳ ಬಗ್ಗೆ ಇದುವರೆಗೂ ಸಹ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ, ಆದರೆ ಅವರಿಬ್ಬರೂ ಬಹಳ ದಿನಗಳಿಂದ ಡೇಟ್ ನಲ್ಲಿದ್ದಾರೆ ಎಂದು ಅವರ ಅಭಿಮಾನಿಗಳು ಹೇಳುತ್ತಾನೆ ಬಂದಿದ್ದಾರೆ. ಸಮಂತಾ ‘ರಕ್ತ ಬ್ರಹ್ಮಾಂಡ್: ದಿ ಬ್ಲಡಿ ಕಿಂಗ್‌ಡಮ್’ ಚಿತ್ರದಲ್ಲಿ ನಿಡಿಮೋರ್ ಜೊತೆಗೆ ಕೆಲಸ ಮಾಡಿದ್ದಾರೆ. ಸಮಂತಾ ಕೊನೆಯದಾಗಿ ಸಿಟಾಡೆಲ್: ಹನಿ ಬನ್ನಿ ಚಿತ್ರದಲ್ಲಿ ವರುಣ್ ಧವನ್ ಜೊತೆ ನಟಿಸಿದ್ದರು.