ದಾವಣಗೆರೆ:- ಇಲ್ಲಿನ SBI ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 12.96 ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ್ದ ಐವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ವೇತನ ಹೆಚ್ಚಳಕ್ಕೆ ಆಗ್ರಹ: ಪ್ರತಿಭಟನೆ ವೇಳೆ ಅಸ್ವಸ್ಥಗೊಂಡ ಅತಿಥಿ ಉಪನ್ಯಾಸಕ, ಆಸ್ಪತ್ರೆಗೆ ದಾಖಲು!
ಅಜಯ್ ಕುಮಾರ್, ವಿಜಯ್ ಕುಮಾರ್, ನ್ಯಾಮತಿಯ ಮಂಜುನಾಥ್, ಹೊನ್ನಾಳಿಯ ನಿವಾಸಿ ಅಭಿಷೇಕ್ ಹಾಗೂ ಚಂದ್ರಶೇಖರ್ ಬಂಧಿತರು. ಇವರು ಜಿಲ್ಲೆಯ ನ್ಯಾಮತಿ ಪಟ್ಟಣದ ಎಸ್‌ಬಿಐ ಬ್ಯಾಂಕ್ ನಲ್ಲಿ ಕೃತ್ಯ ಎಸಗಿದ್ದರು.
ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಈ ದರೋಡೆ ನಡೆದಿತ್ತು. ಬ್ಯಾಂಕ್ ಕಿಟಕಿಯ ಸರಳನ್ನು ಮುರಿದು, 12.96 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ದೋಚಿಕೊಂಡು ಹೋಗುವಾಗ ಬ್ಯಾಂಕ್ ತುಂಬೆಲ್ಲಾ ಕಾರದ ಪುಡಿಯನ್ನು ಚೆಲ್ಲಿ ಎಸ್ಕೇಪ್ ಆಗಿದ್ದರು.
ಪೊಲೀಸ್ ಇಲಾಖೆಗೆ ದರೋಡೆಕೋರರನ್ನು ಪತ್ತೆ ಹಚ್ಚುವುದೇ ದೊಡ್ಡ ತಲೆನೋವಾಗಿತ್ತು. ಎಸ್‌ಪಿ ಉಮಾ ಪ್ರಶಾಂತ್ ಹಾಗೂ ಎಎಸ್ಪಿ ಸ್ಯಾಮ್ ವರ್ಗೀಸ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ತನಿಖೆ ನಡೆಸಿದಾಗ ದರೋಡೆಕೋರರ ಪತ್ತೆಯಾಗಿದ್ದು, ಮೂವರು ಸ್ಥಳೀಯರನ್ನು ಸೇರಿ ಒಟ್ಟು 5 ಜನ ದರೋಡೆಕೋರರನ್ನು ಅರೆಸ್ಟ್ ಮಾಡಿದ್ದಾರೆ. ತಮಿಳುನಾಡು ಮೂಲದ ಪರಮಾನಂದ ಎನ್ನುವ ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಸದ್ಯ ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ.