ಧಾರವಾಡ:- ನಿಂತ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ನರೇಂದ್ರ ಬೈಪಾಸ್ ಬಳಿ ಜರುಗಿದೆ. ವಿಶ್ವಾಸ ಸಾವಿಗೀಡಾದ ವ್ಯಕ್ತಿ.
ಸ್ಕೂಟಿಯಲ್ಲಿ ಛತ್ರಿ ಹಿಡಿದುಕೊಂಡು ಬರುತ್ತಿದ್ದ ಸಮಯದಲ್ಲಿ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಮತ್ತೋರ್ವನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.