ವಿಜಯನಗರ : ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಸಂಜನಾಬಾಯಿ ಪ್ರಥಮ ಸ್ಥಾನ ಪಡೆದಿದ್ದಾರೆ.
600ಕ್ಕೆ 597 ಅಂಕ ಪಡೆದಿರುವ ಸಂಜನಾಬಾಯಿ ಕಲಾ ವಿಭಾಗದಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನ ಪಡೆದಿದ್ದಾರೆ. ಸಂಜನಾಬಾಯಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಪಿಯು ಕಾಲೇಜ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇದೀಗ ಶಾಲಾ ಮುಖ್ಯಸ್ಥರು ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.
ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದವರಾಗಿದ್ದು, ಸಂಜನಾ ಬಾಯಿ ಅವರ ತಂದೆ ಲಾರಿ ಡ್ರೈವರ್ ಆಗಿದ್ದು, ಬಡ ಕುಟುಂಬದ ಹೆಣ್ಣು ಮಗು ಇದೀಗ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದು,ಅವರ ಕುಟುಂಬಕ್ಕೆ ಖುಷಿಯ ವಿಚಾರವಾಗಿದೆ.