ರಂಜಾನ್ ಮುಸ್ಲಿಮರ ಪವಿತ್ರ ಹಬ್ಬ. ರಂಜಾನ್ ಕೋಮು ಸೌಹಾರ್ದತೆಯ ತಿಂಗಳಾಗಿದ್ದು, ಆಧ್ಯಾತ್ಮಿಕ ಅನ್ವೇಷಣೆಯ ಸಮಯದಲ್ಲಿ ಮುಂಜಾನೆಯಿಂದ ಮುಸ್ಸಂಜೆಯವರೆಗೆ ಉಪವಾಸ ಮಾಡಲಾಗುತ್ತದೆ. ಪವಿತ್ರ ಗ್ರಂಥ ಕುರಾನ್ನ ತೀವ್ರವಾದ ಪಠಣಗಳು ಮತ್ತು ದಾನ ಕಾರ್ಯಗಳನ್ನು ಮಾಡಲಾಗುತ್ತದೆ. ಚಂದ್ರನ ದರ್ಶನವನ್ನು ಅವಲಂಬಿಸಿ ರಂಜಾನ್ ಸಾಮಾನ್ಯವಾಗಿ 29 ಅಥವಾ 30 ದಿನಗಳವರೆಗೆ ಇರುತ್ತದೆ. ಈ ಅವಧಿಯಲ್ಲಿ ಎಲ್ಲಾ ವಯಸ್ಕ ಮುಸ್ಲಿಮರು ಉಪವಾಸ ಮಾಡುವುದು ಕಡ್ಡಾಯವಾಗಿದೆ.
ಈದ್-ಉಲ್-ಫಿತರ್ ಇತಿಹಾಸ
ಈದ್-ಉಲ್-ಫಿತರ್ ಇಸ್ಲಾಮಿಕ್ ಪ್ರವಾದಿ ಮುಹಮ್ಮದ್ ಅವರಿಂದ ಹುಟ್ಟಿಕೊಂಡಿತು ಎನ್ನಲಾಗಿದೆ. ಕೆಲವು ಸಂಪ್ರದಾಯಗಳ ಪ್ರಕಾರ, ಮೆಕ್ಕಾದಿಂದ ಮುಹಮ್ಮದ್ ವಲಸೆ ಬಂದ ನಂತರ ಈ ಹಬ್ಬಗಳನ್ನು ಮದೀನಾದಲ್ಲಿ ಪ್ರಾರಂಭಿಸಲಾಯಿತು. ಇಸ್ಲಾಮಿಕ್ ಪ್ರವಾದಿಯ ಪ್ರಸಿದ್ಧ ಒಡನಾಡಿಯಾದ ಅನಸ್, ಮುಹಮ್ಮದ್ ಮದೀನಾಕ್ಕೆ ಆಗಮಿಸಿದಾಗ, ಜನರು ಎರಡು ನಿರ್ದಿಷ್ಟ ದಿನಗಳನ್ನು ಆಚರಿಸುವುದನ್ನು ಕಂಡುಕೊಂಡರು. ಈದ್-ಉಲ್-ಫಿತರ್ ಮತ್ತು ಈದ್-ಅಲ್-ಅಧಾ. ಇನ್ನು ಈ ಹಬ್ಬಕ್ಕೆ ಅದರದೇ ಆದ ಮಹತ್ವ ಇದೆ. ಈ ತಿಂಗಳಲ್ಲಿ ಆಚರಿಸುವ ಆಚರಣೆಗಳು ಮಹತ್ವದ ವೈಜ್ಞಾನಿಕ ಕಾರಣಗಳನ್ನು ಒಳಗೊಂಡಿವೆ.
ಈದ್-ಉಲ್-ಫಿತರ್ ಆಚರಣೆ ಹೇಗಿರುತ್ತದೆ ?
ರಂಜಾನ್ ತಿಂಗಳಲ್ಲಿ ರೋಜಾ ಅಥವಾ ಉಪವಾಸಕ್ಕೆ ಅದರದೇ ಆದ ಮಹತ್ವವಿದೆ. ಸೂರ್ಯೋದಯಕ್ಕೆ ಮುಂಚಿನ ತಿಂಡಿಯನ್ನು ಸೋಹರ್ ಎಂದು ಕರೆಯಲಾಗುತ್ತದೆ ಮತ್ತು ಸೂರ್ಯಾಸ್ತದ ನಂತರ ಉಪವಾಸವನ್ನು ಮುಕ್ತಾಯಗೊಳಿಸುವ ಪ್ರಕ್ರಿಯೆಯನ್ನು ಇಫ್ತಾರ್ ಎಂದು ಕರೆಯಲಾಗುತ್ತದೆ. ಮುಸ್ಲಿಮರು ಉಪವಾಸದ ವೇಳೆ ಸಿಗರೇಟ್, ಮದ್ಯ, ತಂಬಾಕು ಸೇವನೆ, ಲೈಂಗಿಕ ಸಂಬಂಧವನ್ನು ಬೆಳೆಸುವುದನ್ನೂ ಕೂಡ ತಪ್ಪಿಸುತ್ತಾರೆ. ರಂಜಾನ್ ತಿಂಗಳಲ್ಲಿ ಮುಸ್ಲಿಮರು ತಮ್ಮನ್ನು ಅಧ್ಯಾತ್ಮ ಪ್ರವೃತ್ತಿಗೆ ಅರ್ಪಿಸಿಕೊಳ್ಳುತ್ತಾರೆ.
ಈದ್ ಹಬ್ಬವು ಚಂದ್ರನನ್ನು ನೋಡಿದ ನಂತರವೇ ಪ್ರಾರಂಭವಾಗುತ್ತದೆ. ಈದ್ ಉಲ್-ಫಿತರ್ ಉಪವಾಸದ ಅಂತ್ಯವನ್ನು ಸೂಚಿಸುತ್ತದೆ. ಪ್ರವಾದಿ ಮೊಹಮ್ಮದ್ ಅವರ ಬೋಧನೆಗಳ ದಾಖಲೆಯಾದ ಸುನ್ನತ್ ಅನ್ನು ಅನುಸರಿಸಿ, ಹಬ್ಬದಂದು ಮುಸ್ಲಿಮರು ಮುಂಜಾನೆ ಬೇಗನೆ ಎದ್ದು ತಮ್ಮ ದೈನಂದಿನ ಪ್ರಾರ್ಥನೆ ಸಲ್ಲಿಸಿ, ಸ್ನಾನ ಮಾಡಿ ಹೊಸ ಬಟ್ಟೆ ತೊಟ್ಟು ಇತ್ತರ್ (ಸುಗಂಧ ದ್ರವ್ಯ) ಧರಿಸುತ್ತಾರೆ.
ಬಳಿಕ ಹಬ್ಬದ ಪ್ರಾರ್ಥನೆಗೆ ಹೋಗುವ ಮುನ್ನ ಮನೆಯಲ್ಲಿ ತಯಾರಿಸಿದ ಸಿಹಿ ತಿಂಡಿಯನ್ನು ಸೇವಿಸುತ್ತಾರೆ. ಹುಡುಗರು, ಯುವಕರು ಸೇರಿದಂತೆ ಈದ್ಗ್ ಬಳಿ ಎಲ್ಲಾ ಮುಸ್ಲಿಮರು ಒಟ್ಟಿಗೆ ಸೇರಿ ಹಬ್ಬದ ವಿಶೇಷ ಸಭೆಯಲ್ಲಿ ಪ್ರಾರ್ಥನೆಗಳನ್ನು ಮಾಡುತ್ತಾರೆ. ಆದ್ರೆ ಹೆಣ್ಣು ಮಕ್ಕಳು, ಮಹಿಳೆಯರು ಮನೆಯಲ್ಲೇ ಹಬ್ಬನ ನಮಾಜ್ ಮಾಡುತ್ತಾರೆ.
ರಂಜಾನ್ ಉಪವಾಸ ಆಚರಣೆ ರಂಜಾನ್ ತಿಂಗಳಲ್ಲಿ ರೋಜಾ ಅಥವಾ ಉಪವಾಸಕ್ಕೆ ಅದರದೇ ಆದ ಮಹತ್ವವಿದೆ. ಸೂರ್ಯೋದಯಕ್ಕೆ ಮುಂಚಿನ ತಿಂಡಿಯನ್ನು ಸೋಹರ್ ಎಂದು ಕರೆಯಲಾಗುತ್ತದೆ ಮತ್ತು ಸೂರ್ಯಾಸ್ತದ ನಂತರ ಉಪವಾಸವನ್ನು ಮುಕ್ತಾಯಗೊಳಿಸುವ ಪ್ರಕ್ರಿಯೆಯನ್ನು ಇಫ್ತಾರ್ ಎಂದು ಕರೆಯಲಾಗುತ್ತದೆ. ಇನ್ನು ರಂಜಾನ್ ಸಮಯದಲ್ಲಿ ಕೇವಲ ದೇಹಕ್ಕೆ ಮಾತ್ರವಲ್ಲ ಮನಸ್ಸಿಗೂ ಉಪವಾಸ ಮಾಡಿಸಲಾಗುತ್ತದೆ. ಮುಸ್ಲಿಮರು ಉಪವಾಸದ ವೇಳೆ ಸಿಗರೇಟ್, ಮದ್ಯ, ತಂಬಾಕು ಸೇವನೆ, ಲೈಂಗಿಕ ಸಂಬಂಧವನ್ನು ಬೆಳೆಸುವುದನ್ನೂ ಕೂಡ ತಪ್ಪಿಸುತ್ತಾರೆ. ಏಕೆಂದರೆ ಉಪವಾಸದ ಸಮಯದಲ್ಲಿ ಇಂಥ ಚಟುವಟಿಕೆಗಳನ್ನು ಪಾಪ ಎಂದು ಪರಿಗಣಿಸಲಾಗುತ್ತದೆ. ರಂಜಾನ್ ತಿಂಗಳಲ್ಲಿ ಮುಸ್ಲಿಮರು ತಮ್ಮನ್ನು ಅಧ್ಯಾತ್ಮ ಪ್ರವೃತ್ತಿಗೆ ಅರ್ಪಿಸಿಕೊಳ್ಳುತ್ತಾರೆ.