ಬೀದರ್:- ಹಿರಿಯ ವಕೀಲ ಸದಾ ಶಿವರೆಡ್ಡಿ ಮೇಲೆ ಹಲ್ಲೆ ಖಂಡಿಸಿ ತೋಳಿಗೆ ಕೆಂಪು ಪಟ್ಟಿ ಧರಿಸಿ ಜಿಲ್ಲಾ ವಕೀಲರ ಸಂಘದಿಂದ ಪ್ರತಿಭಟನೆ ನಡೆದಿರುವ ಘಟನೆ ಬೀದರ್‌ನಲ್ಲಿ ಜರುಗಿದೆ. ಹಲ್ಲೆ ಖಂಡಿಸಿ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆದಿದೆ.
IPL 2025: ಗುರುವಾರ ಆರ್ ಸಿಬಿ Vs ಆರ್ ಆರ್ ಪಂದ್ಯ ರದ್ದಾಗುವ ಸಾಧ್ಯತೆ!?
ಪ್ರತಿಭಟನೆ ವೇಳೆ, ಏಕಾಏಕಿ ಕಚೇರಿಗೆ ನುಗ್ಗಿ ಹಲ್ಲೆ ಮಾಡಿದವರ ಬಂಧನ ಇನ್ನು ಆಗಿಲ್ಲಾ ಎಂದು ವಕೀಲರು ಆಕ್ರೋಶ ಹೊರ ಹಾಕಿದ್ದಾರೆ. ಸಾಮಾನ್ಯ ಜನರ ಮೇಲೆ ಹಲ್ಲೆ ನಡೆದಾಗ ಬಂಧನ ಆಗ್ತಾರೆ. ಇಂದು ವಕೀಲರ ಮೇಲೆ ಹಲ್ಲೆ ಆದ್ರೂ ಬಂಧನ ಅಗಿಲ್ಲಾ ಎಂದು ಅಸಮಧಾನ ಹೊರ ಹಾಕಿದ್ದಾರೆ. ಅಲ್ಲದೇ ರಾಜ್ಯದಲ್ಲಿ ವಕೀಲರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಹೀಗಾಗಿ ಹಲ್ಲೆ ಮಾಡಿದ ದುಷ್ಕರ್ಮಿಗಳನ್ನ ಕೂಡಲೇ ಪತ್ತೆ ಹಚ್ಚಿ, ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿದರು. ಹಾಗೂ ಜಿಲ್ಲಾಧಿಕಾರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಶಿವಶರಣಪ್ಪ ಪಾಟೀಲ್, ಉಪಾಧ್ಯಕ್ಷರು ಹಾಗು ಪದಾಧಿಕಾರಿಗಳು ಭಾಗಿಯಾಗಿದ್ದರು.