ಮಂಗಳೂರು: ಕರಾವಳಿಯಲ್ಲಿ ನಡೆದ ಸರಣಿ ಹತ್ಯೆಗಳಿಂದಾಗಿ ಕಾನೂನು ಸುವ್ಯವಸ್ಥೆ ಬಗ್ಗೆಯ ಚರ್ಚೆ ಎದಿದ್ದಿ,. ಹೀಗಾಗಿ ಇಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಮಂಗಳೂರಿಗೆ ಭೇಟಿ ನೀಡಿದ್ದು, ಸ್ಥಳೀಯ ಅಧಿಕಾರಿಗಳು ಹಾಗೂ ಮುಸ್ಲಿಂ ಮುಖಂಡರೊಂದಿಗೆ ಸರಣಿ ಸಭೆಗಳನ್ನು ನಡೆಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಸಚಿವ ಪರಮೇಶ್ವರ್ ಸರ್ಕೀಟ್ ಹೌಸ್ ನಲ್ಲಿ ಮಾತುಕತೆ ನಡೆಸಿದ್ದಾರೆ.
ಯಾರೇ ಆಗಲಿ ಕೋಮುಭಾವನೆ ಕೆಡಿಸೋ ಹೇಳಿಕೆ ನೀಡಿದ್ರೆ ನಿರ್ದಾಕ್ಷಿಣ್ಯ ಕ್ರಮ: ಗೃಹ ಸಚಿವ ಪರಮೇಶ್ವರ್!
ಬಜ್ಪೆಯ ಕಿನ್ನಿಪದವಿನಲ್ಲಿ ಹಿಂದುತ್ವಪರ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿಯ ಕಾರನ್ನು ಅಪಘಾತ ಮಾಡಿ, ಬಳಿಕ ಆತನಿಗೆ ತಲವಾರಿನಿಂದ ಕೊಚ್ಚಿ ಹತ್ಯೆ ಮಾಡಿದ್ದರು.