ಗೋವಾ : ಶಿರ್ಗಾಂವ್ ದೇವಸ್ಥಾನದ ಜಾತ್ರ ಮಹೋತ್ಸವದ ವೇಳೆ ಕಾಲ್ತುಳಿತ ಸಂಭವಿಸಿದ್ದು, ಏಳ್ವರು ದುರ್ಮರಣಕ್ಕೀಡಾಗಿದ್ದಾರೆ.
ಗೋವಾದ ಶಿರ್ಗಾಂವ್ ಗ್ರಾಮದಲ್ಲಿ ಶತಮಾನಗಳ ಐತಿಹ್ಯವಿರುವ ಲೈರೈ ದೇವಿ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯುತ್ತಿತ್ತು. ಜಾತ್ರೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜ ನೆರೆದಿದ್ದು, ಈ ವೇಳೆ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತದಲ್ಲಿ 7 ಜನರು ಸಾವನವನ್ನಪ್ಪಿದ್ದು, 30ಕ್ಕೂ ಅಧಿಕ ಜನರಿಗೆ ಗಾಯಗಳಾಗಿದೆ.
ಕೂಡಲೇ ಪೊಲೀಸರು ಮತ್ತು ರಕ್ಷಣಾ ತಂಡ ಸ್ಥಳಕ್ಕೆ ದೌಡಾಯಿಸಿ, ಜನರನ್ನು ಸುರಕ್ಷಿತ ಸ್ಥಳಕ್ಕ ರವಾನಿಸಿದ್ದಾರೆ. ಸದ್ಯ ಘಟನೆಯಲ್ಲಿ ಗಾಯಗೊಂಡವರಿಗೆ ಮಾಪುಸಾದ ಗೋವಾ ವೈದ್ಯಕೀಯ ಕಾಲೇಜು ಮತ್ತು ಉತ್ತರ ಗೋವಾ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಜಾತ್ರಾ ಮಹೋತ್ಸವ ವೇಳೆ ಜನರು ಒಂದು ಗುಂಪೊಂದು ನಿಯಂತ್ರಣ ಕಳೆದುಕೊಂಡು ಕಾಲ್ತುಳಿತ ಸಂಭವಿಸಿದೆ. ನಂತರ ಪರಿಸ್ಥಿತಿ ವಿಕೋಪಕ್ಕೆ ಹೋಯಿತು.
ಇಂಗಳಿ ಗ್ರಾಮದಲ್ಲಿ ಘೋರ ದುರಂತ; ಕೃಷಿ ಹೊಂಡದಲ್ಲಿ ಮುಳುಗಿ 3 ಮಕ್ಕಳ ದಾರುಣ ಸಾವು
ಇನ್ನು ಘಟನೆ ಬಗ್ಗೆ ಸಿಎಂ ಪ್ರಮೋದ್ ಸಾವಂತ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಶಿರ್ಗಾಂವ್ನ ಲೈರೈ ಜತ್ರಾದಲ್ಲಿ ಸಂಭವಿಸಿದ ದುರಂತ ಕಾಲ್ತುಳಿತದಿಂದ ತೀವ್ರ ದುಃಖಿತನಾಗಿದ್ದೇನೆ. ನಾನು ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿ ಮಾಡಿದ್ದು, ಸಂತ್ರಸ್ತ ಕುಟುಂಬಗಳಿಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದೇನೆ. ಅಗತ್ಯ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.