ಜೀನಿ ಸಂಸ್ಥೆಯ ಮಾಲೀಕ ದಿಲೀಪ್ ಕುಮಾರ್ ವಿರುದ್ದ ಮಹಿಳೆ ಮೇಲೆ ಲೈಂಗಿಕ ಕಿರುಕುಳ ಆರೋಪದಡಿ ದೂರು ದಾಖಲಾಗಿದೆ. ದಿಲೀಪ್ ಕುಮಾರ್ ಕಳೆದ ಆರು ತಿಂಗಳಿಂದ ಲೈಂಗಿಕ ಕಿರುಕುಳ (Sexual harassment ) ನೀಡುತ್ತಿದ್ದಾರೆ ಎಂದು ಆರೋಪಿಸಿ ಕಳ್ಳಂಬೆಳ್ಳ ಪೊಲೀಸ್ ಠಾಣೆಗೆ ಮಹಿಳೆ ಮೇಘನಾ ಎಂಬುವವರು ದೂರು ನೀಡಿದ್ದಾರೆ. ಶಿರಾ ತಾಲೂಕಿನ ಯರಗುಂಟೆಯಲ್ಲಿರುವ ಜೀನಿ ಸಂಸ್ಥೆಯಲ್ಲಿ ಹತ್ತು ತಿಂಗಳ ಹಿಂದೆ ನಾನು ಕೆಲಸಕ್ಕೆ ಸೇರಿದ್ದೆ, ಕಳೆದ 15 ದಿನಗಳಿಂದ ಜೀನಿ ಸಂಸ್ಥೆಯ ಮಾಲೀಕ ದಿಲೀಪ್ ಕುಮಾರ್ ನನ್ನೊಂದಿಗೆ ಅಸಭ್ಯವಾಗಿ ಮಾತನಾಡಿ, ನನ್ನನ್ನು ಕೈ ಹಿಡಿದು ಎಳೆದು ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ್ದಾರೆ. ನನ್ನ ಜೊತೆ ದೈಹಿಕ ಸಂಪರ್ಕ ಇಟ್ಟುಕೊಂಡ್ರೆ ನನ್ನ ಹೆಂಡ್ತಿಗಿಂತ ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ ಅಂತ ವತ್ತಾಯ ಮಾಡುತ್ತಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ಈ ಹಿಂದೆ ದೂರು ನೀಡಿದ್ದರೂ ಎಫ್ಐಆರ್ ದಾಖಲಿಸದೆ ಪೊಲೀಸರು ಕೇಸನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈಗ ಜೀನಿ ಸಂಸ್ಥೆಯ ಮಾಲೀಕ ದಿಲೀಪ್ ಕುಮಾರ್ ವಿರುದ್ದ ಮಹಿಳೆ ಮೇಲೆ ಲೈಂಗಿಕ ಕಿರುಕುಳ ಆರೋಪದಡಿ ದೂರು ದಾಖಲಾಗಿದೆ. ದೂರು ದಾಖಲಿಸಿಕೊಂಡಿರುವ ಕಳ್ಳಂಬೆಳ್ಳ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.