ಬೆಂಗಳೂರು: ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಹಾಗೂ ಯಲ್ಲಾಪುರ ಕ್ಷೇತ್ರ ಶಿವರಾಮ್ ಹೆಬ್ಬಾರ್ ಅವರಿಗೆ ಬಿಜೆಪಿ ಶಾಕ್ ಕೊಟ್ಟಿದ್ದು, ಇಬ್ಬರು ಶಾಸಕರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ 6 ವರ್ಷಗಳ ಕಾಲ ಇಬ್ಬರು ಶಾಸಕರನ್ನು ಉಚ್ಛಾಟನೆ ಮಾಡಲು ಕೇಂದ್ರ ಶಿಸ್ತು ಸಮಿತಿಯಿಂದ ಆದೇಶ ನೀಡಿದೆ. ಕೇಂದ್ರ ಶಿಸ್ತು ಸಮಿತಿ ಕಾರ್ಯದರ್ಶಿ ಓಂಪಾಠಕ್ ಅವರು ಆದೇಶ ನೀಡಿದ್ದಾರೆ.
ಯತ್ನಾಳ್ ಬಳಿಕ ಇಬ್ಬರು ಶಾಸಕರಿಗೆ ಶಾಕ್!
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಹೇಳಿಕೆ ನೀಡುತ್ತಿದ್ದ ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಹೈಕಮಾಂಡ್ ಈಗಾಗಲೇ ಉಚ್ಛಾಟನೆ ಮಾಡಿದೆ. ಇದೀಗ ಮತ್ತಿಬ್ಬರು ಶಾಸಕರಿಗೆ ಬಿಜೆಪಿ ಶಾಕ್ ಕೊಟ್ಟಿದ್ದು, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ಬಿಜೆಪಿ ಉಚ್ಛಾಟನೆ ಮಾಡಿದೆ.