ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, ತಂಡದ ಪ್ರಮುಖ ಆಟಗಾರ ನಿರ್ಣಾಯಕ ಪಂದ್ಯಗಳಿಗೂ ಮುನ್ನ ತವರಿಗೆ ತೆರಳಿದ್ದಾರೆ ಎಂದು ವರದಿ ಆಗಿದೆ.
ಇಂದು ಗದಗ ಬಂದ್ ಗೆ ಕರೆ: ಪ್ರತಿಬಂಧಕಾಜ್ಞೆ ಜಾರಿ… ತೋಂಟದಾರ್ಯ ಮಠದ ಸುತ್ತಲೂ ಖಾಕಿ ಅಲರ್ಟ್!
ಆರ್ಸಿಬಿ ತಂಡದ ಸ್ಪೋಟಕ ದಾಂಡಿಗ ಫಿಲ್ ಸಾಲ್ಟ್ ಐಪಿಎಲ್ನ ಪ್ಲೇಆಫ್ ಪಂದ್ಯಗಳಿಗೆ ಅಲಭ್ಯರಾಗುವ ಸಾಧ್ಯತೆಯಿದೆ. ಇದಕ್ಕೆ ಮುಖ್ಯ ಕಾರಣ ಸಾಲ್ಟ್ ತಂದೆಯಾಗುತ್ತಿರುವುದು. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸಾಲ್ಟ್ ಶೀಘ್ರದಲ್ಲೇ ಇಂಗ್ಲೆಂಡ್ಗೆ ಮರಳಲಿದ್ದು, ಈ ಮೂಲಕ ದೀರ್ಘಕಾಲದ ಗೆಳತಿ ಅಬಿ ಮೆಕ್‌ಲಾವೆನ್ ಅವರ ಆರೈಕೆಗೆ ಆದ್ಯತೆ ನೀಡಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಫಿಲ್ ಸಾಲ್ಟ್ ಆರ್ಸಿಬಿ ತಂಡದ ಪ್ಲೇಆಫ್ ಪಂದ್ಯಗಳಿಗೆ ಅಲಭ್ಯರಾಗುವ ಸಾಧ್ಯತೆಯಿದೆ. ಇತ್ತ ಸಾಲ್ಟ್ ಅಲಭ್ಯರಾದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟಿಮ್ ಸೈಫರ್ಟ್ ಅವರನ್ನು ಆರಂಭಿಕನಾಗಿ ಕಣಕ್ಕಿಳಿಸಲಿದೆ.
ನ್ಯೂಝಿಲೆಂಡ್ ಪರ ಸೈಫರ್ಟ್ ಆರಂಭಿಕನಾಗಿ ಕಣಕ್ಕಿಳಿಯುವ ದಾಂಡಿಗ. ಹೀಗಾಗಿ ಫಿಲ್ ಸಾಲ್ಟ್ ಬದಲಿಯಾಗಿ ಕಿವೀಸ್ ಬ್ಯಾಟರ್ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು. ಹಾಗೆಯೇ ಆರ್ಸಿಬಿ ತಂಡದ ಪ್ಲೇಆಫ್ ಪಂದ್ಯಗಳಿಗೆ ಲುಂಗಿ ಎನ್ಗಿಡಿ ಹಾಗೂ ಜೇಕಬ್ ಬೆಥೆಲ್ ಕೂಡ ಅಲಭ್ಯರಾಗಿದ್ದಾರೆ. ವಿಶ್ವ ಟೆಸ್ಟ್ ಚಾಪಿಯನ್ಶಿಪ್ ಫೈನಲ್ ಪಂದ್ಯಕ್ಕಾಗಿ ಸೌತ್ ಆಫ್ರಿಕಾ ತಂಡವನ್ನು ಕೂಡಿಕೊಳ್ಳಲು ಎನ್ಗಿಡಿ ತವರಿಗೆ ಹಿಂತಿರುಗಿದರೆ, ಬೆಥೆಲ್ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಇಂಗ್ಲೆಂಡ್ಗೆ ಮರಳಲಿದ್ದಾರೆ.
ಇತ್ತ ಲುಂಗಿ ಎನ್ಗಿಡಿ ಬದಲಿಗೆ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿ ಎಂಟ್ರಿ ಕೊಟ್ಟರೆ, ಜೇಕಬ್ ಬೆಥೆಲ್ ಬದಲಿಯಾಗಿ ನ್ಯೂಝಿಲೆಂಡ್ನ ಟಿಮ್ ಸೈಫರ್ಟ್ ಆರ್ಸಿಬಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಪ್ಲೇಆಫ್ ಪಂದ್ಯಗಳಿಗೂ ಮುನ್ನ ಬದಲಿ ಆಟಗಾರರನ್ನು ಆಯ್ಕೆ ಮಾಡಿಕೊಂಡಿದ್ದಾರೆ.