ಬೆಂಗಳೂರು: ಬೆಲೆ ಏರಿಕೆಯ ಬರೆ ನಡುವೆ ರಾಜ್ಯದ ಜನರಿಗೆ ಕರೆಂಟ್ ಶಾಕ್ ಫಿಕ್ಸ್ ಆಗಿದೆ. ಪ್ರತಿ ಯೂನಿಟ್‌ಗೆ 36 ಪೈಸೆ ಏರಿಕೆ ಮಾಡಿ ಕೆಇಆರ್‌ಸಿ ಆದೇಶ ಹೊರಡಿಸಿದೆ. ಹಾಲಿನ ದರ ಏರಿಕೆಯಿಂದ ಶಾಕ್ ಆಗಿದ್ದ ಜನರಿಗೆ ಇದೀಗ ಕರೆಂಟ್ ಶಾಕ್‌ನ ಭೀತಿ ಶುರುವಾಗಿದೆ. ಈ ಬಗ್ಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ಇಂದು ಅಧಿಕೃತ ಆದೇಶ ಹೊರಡಿಸಿದೆ.
ವಾಸ್ತು ಪ್ರಕಾರ ಈ ದಿಕ್ಕಿನಲ್ಲಿ ಮಲಗಿ: ಜೀವನದಲ್ಲಿ ಅನಿರೀಕ್ಷಿತ ಅದೃಷ್ಟ ನಿಮ್ಮದಾಗುತ್ತೆ.!
ಯೂನಿಟ್‍ಗೆ 49 ಪೈಸೆ ಏರಿಕೆ ಮಾಡುವಂತೆ ಡಿಸೆಂಬರ್ ಕೊನೆಯ ವಾರದಲ್ಲಿ ಎಸ್ಕಾಂಗಳು ಕೆಇಆರ್‌ಸಿ ಪ್ರಸ್ತಾವನೆ ಸಲ್ಲಿಸಿದ್ದವು. ಪ್ರಸ್ತಾವನೆಯಂತೆ ಉತ್ಪಾದನೆಯ ಖರ್ಚು-ವೆಚ್ಚ ಮತ್ತು ನಿರ್ವಹಣೆಯ ನಷ್ಟ ಸರಿದೂಗಿಸುವ ನಿಟ್ಟಿನಲ್ಲಿ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಹೀಗಾಗಿ ಇಂದು ಕೆಇಆರ್‌ಸಿ ಅಧಿಕೃತವಾಗಿ ಪ್ರತಿ ಯೂನಿಟ್ ವಿದ್ಯುತ್ಗೆ 36 ಪೈಸೆ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಏಪ್ರಿಲ್ 1 ರಿಂದಲೇ ಹೊಸ ದರ ಜಾರಿಯಾಗಲಿದ್ದು, ರಾಜ್ಯದ ಜನರಿಗೆ ವಿದ್ಯುತ್ ದರದ ಬಿಸಿ ತಟ್ಟಲಿದೆ.