ಚಿಕ್ಕೋಡಿ:- ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ಶಾಲೆಯಲ್ಲಿ ಆಟವಾಡುತ್ತಿದ್ದ ಸಂದರ್ಭ ಹೃದಯಾಘಾತಕ್ಕೊಳಗಾಗಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಜರುಗಿದೆ.
ಮೊಡವೆಯಿಂದ ಮುಖದ ಕಳೆ ಕುಂದಿದ್ಯಾ!? ಹಾಗಿದ್ರೆ ವಾರ ಪೂರ್ತಿ ಹೀಗೆ ಮಾಡಿ!
ಬಂಡಗಾರ (15) ಮೃತ ವಿದ್ಯಾರ್ಥಿನಿ. ಚಮಕೇರಿ ಗ್ರಾಮದ ಖಾಸಗಿ ಶಾಲೆಯಲ್ಲಿ 9 ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ರೇಣುಕಾ ಆಟವಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾಳೆ. ಹೃದಯಾಘಾತದ ವಿಷಯ ತಿಳಿಯುತ್ತಿದ್ದಂತೆಯೇ ಶಾಲೆಯ ಶಿಕ್ಷಕರು ಹಾಗೂ ಪೋಷಕರು ಹೆಚ್ಚಿನ ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ
ಆದರೆ ಅಥಣಿ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿಯೇ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ. ಮಗಳನ್ನು ಕಳೆದುಕೊಂಡ ಪೋಷಕರ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.