ಮಂಗಳೂರು:- ಕೇವಲ ಒಂದು ವಾರದಲ್ಲೇ ಒಂಭತ್ತು ಪ್ರಾಣಿಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಜರುಗಿದೆ.
2 ಕೃಷ್ಣಮೃಗ, 5 ಪುನುಗು ಬೆಕ್ಕು, 1 ಬಿಳಿ ಗೂಬೆ ಹಾಗೂ 1 ಬರಿಂಕ ಸೇರಿದಂತೆ ಒಟ್ಟು 9 ಪ್ರಾಣಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಪಿಲಿಕುಳ ಜೈವಿಕ ಉದ್ಯಾನವನದೊಳಗೆ ನೀರು ನುಗ್ಗಿ, ಕಂಪೌಂಡ್ ಕುಸಿದು ಪ್ರಾಣಿಗಳಿಗೆ ತೊಂದರೆಯಾಗಿತ್ತು. ಈ ಬಗ್ಗೆ ವನ್ಯಜೀವಿ ಸಂರಕ್ಷಕ ಭುವನ್ ದೇವಾಡಿಗ ಅವರು ಸೆಂಟ್ರಲ್ ಝೂ ಅಥಾರಿಟಿಗೆ ದೂರು ನೀಡಿದ್ದರು. ಈ ದೂರಿನನ್ವಯ ಮುಖ್ಯ ವನ್ಯಜೀವಿ ವಾರ್ಡನ್‌ಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು. ಇದಾಗಿ ವಾರದೊಳಗೆ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಒಂಬತ್ತು ಪ್ರಾಣಿಗಳು ಮೃತಪಟ್ಟ ಬಗ್ಗೆ ಮಾಹಿತಿ ದೊರೆತಿದೆ.
ಮಳೆಯ ಹಿನ್ನೆಲೆಯಲ್ಲಿ ಶೀತ ವಾತಾವರಣ ಹೆಚ್ಚಾದ ಪರಿಣಾಮ ಈ ಪ್ರಾಣಿಗಳು ಮೃತಪಟ್ಟಿವೆ ಎಂದು ಜೈವಿಕ ಉದ್ಯಾನವನದ ಪ್ರಭಾರ ನಿರ್ದೇಶಕರು ತಿಳಿಸಿದ್ದಾರೆ.