ಹ್ಯಾಮಿಲ್ಟನ್:– ಗುಂಡಿನ ದಾಳಿಗೆ ಭಾರತೀಯ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಕೆನಡಾದಲ್ಲಿ ಜರುಗಿದೆ. ಘಟನೆಯಲ್ಲಿ ವಿದ್ಯಾರ್ಥಿನಿ ಆಕಸ್ಮಿಕವಾಗಿ ಗುಂಡಿಗೆ ಗುರಿಯಾಗಿದ್ದಾಳೆ.
ಹ್ಯಾಮಿಲ್ಟನ್‌ನ ಕಿಂಗ್ ಸ್ಟ್ರೀಟ್‌ನಲ್ಲಿ ಗುರುವಾರ ರಾತ್ರಿ ಸಂಭವಿಸಿದ ಈ ಗುಂಡಿನ ದಾಳಿಯಲ್ಲಿ ಮೊಹಾಕ್ ಕಾಲೇಜಿನಲ್ಲಿ ಓದಿತ್ತಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿನಿ ಹರ್ಸಿಮ್ರತ್ ರಾಂಧವಾಗೆ ಗುಂಡು ತಗುಲಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಪ್ರಾಥಮಿಕ ತನಿಖೆಯಲ್ಲಿ ಕಪ್ಪು ಬಣ್ಣದ ಕಾರಿನ ಪ್ರಯಾಣಿಕನೊಬ್ಬ ಬಿಳಿ ಸೆಡಾನ್ ಕಾರಿನಲ್ಲಿದ್ದವರ ಮೇಲೆ ಗುಂಡು ಹಾರಿಸಿದ್ದಾನೆ ಎಂದು ತಿಳಿದುಬಂದಿದೆ. ಬಳಿಕ ಎರಡೂ ವಾಹನಗಳು ಸ್ಥಳದಿಂದ ಹೊರಟುಹೋಯಿತು ಎಂದು ತಿಳಿದು ಬಂದಿದೆ.
ಪೊಲೀಸರ ಪ್ರಕಾರ, ಈ ಗುಂಡಿನ ದಾಳಿಯು ಉದ್ದೇಶಿತ ಗುರಿಯಾಗಿರಲಿಲ್ಲ. ಘಟನೆಯ ಬಗ್ಗೆ ತನಿಖೆ ಆರಂಭವಾಗಿದ್ದು, ಶಂಕಿತರನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.