ಬೆಂಗಳೂರು: ಬಿಡದಿ ಫಾರ್ಮ್ ಹೌಸ್ ಬಳಿ ಮೂವರು ದುಷ್ಕರ್ಮಿಗಳು ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಿ ಎಸ್ಕೇಪ್ ಆಗಿದ್ದರು. ಪರಿಣಾಮ ರಿಕ್ಕಿ ರೈ ಅವರ ಮೂಗು ಹಾಗೂ ಬಲ ಬುಜಕ್ಕೆ ಗುಂಡು ತಗುಲಿತ್ತು. ಆ ಕೂಡಲೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಇದೀಗ ರಿಕ್ಕಿ ರೈ ಮೇಲೆ ನಡೆದಿರುವ ಶೂಟೌಟ್ ಪ್ರಕರಣದಲ್ಲಿ ಬಿಡದಿ ಪೊಲೀಸರ ತನಿಖೆ ಚುರುಕಾಗಿದೆ.
ಇದರ ನಡುವೆ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧಾ ರೈ ವಿದೇಶಕ್ಕೆ ತೆರಳಿರುವುದು ಬೆಳಕಿಗೆ ಬಂದಿದೆ. ರಿಕ್ಕಿ ರೈ ಮೇಲಿನ ಶೂಟೌಟ್ ಪ್ರಕರಣ ಸಂಬಂಧ ಅವರ ಕಾರು ಚಾಲಕ ಬಸವರಾಜು ನೀಡಿದ ದೂರಿನ ಮೇರೆಗೆ ಬಿಡದಿ ಪೊಲೀಸ್ ಠಾಣೆಯಲ್ಲಿ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧಾ ರೈ ಮೇಲೂ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಅನುರಾಧಾ ರೈ ಸಿಮ್ ಕಾರ್ಡ್ ವಿಳಾಸ ಆಧರಿಸಿ ನೋಟಿಸ್ ನೀಡಲು ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿರುವ ಅವರ ಮನೆಗೆ ತೆರಳಿದ್ದರು.
ನೀವು ಯಾವಾಗಲೂ ಯಂಗ್ ಆಗಿ ಕಾಣಿಸ್ಬೇಕಾ!? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ!
ಆದರೆ, ಅನುರಾಧಾ ರೈ ಆ ಮನೆಯನ್ನು ಅಮೆರಿಕ ಮೂಲದ ವ್ಯಕ್ತಿಗೆ ಮಾರಾಟ ಮಾಡಿದ್ದಾರೆ. ಅಲ್ಲದೆ, ಏಪ್ರಿಲ್ 14ರಂದೇ ಅಮೆರಿಕಗೆ ತೆರಳಿರುವುದು ಗೊತ್ತಾಗಿದೆ. ಪೊಲೀಸರು ಅನುರಾಧಾ ರೈ ಅವರ ಮೊಬೈಲ್ ಲೊಕೇಶನ್ ಪರಿಶೀಲಿಸಿದಾಗ ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಕೊನೆಯಾಗಿದೆ. ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ಅನುರಾಧಾ ರೈ ಅವರ ನಡೆ ಪೊಲೀಸರಲ್ಲಿ ಸಾಕಷ್ಟು ಅನುಮಾನ ಮೂಡಿಸಿದೆ.