ನವದೆಹಲಿ: ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಆಕ್ಸಿಯಮ್ -4 ಕಾರ್ಯಾಚರಣೆಯ ಯಶಸ್ವಿ ಉಡಾವಣೆಯನ್ನು ಜಗತ್ತು ಸಂಭ್ರಮಿಸಿದೆ. ಇದೀಗ ಬುಧವಾರ ಮಧ್ಯಾಹ್ನ 12:03ರ ವೇಳೆಗೆ ಉಡಾವಣೆ ಆಗಿದ್ದ ಆಕ್ಸಿಯಂ-4 ನೌಕೆ ಇಂದು ಸಂಜೆ 4 ಗಂಟೆ ವೇಳೆಗೆ ಯಶಸ್ವಿಯಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಡಾಕ್ ಆಗಿದೆ.
https://x.com/ANI/status/1938185478043509173?ref_src=twsrc%5Etfw%7Ctwcamp%5Etweetembed%7Ctwterm%5E1938185478043509173%7Ctwgr%5E5f13adbc89e365335d7823365f13d80e641e97d5%7Ctwcon%5Es1_&ref_url=https%3A%2F%2Fwww.ntnews.com%2Fnational%2Fastronaut-shubhanshu-shukla-reaches-space-station-dragon-capsule-docks-2050469
ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತಾರಾಷ್ಟ್ರೀಯ ಬಾಹ್ಯಕಾಶ ಕೇಂದ್ರಕ್ಕೆ ಪ್ರಯಾಣ ಬೆಳೆಸಿದ್ದಾರೆ. ಈ ಮೂಲಕ ಬಾಹ್ಯಾಕಾಶವನ್ನು ತಲುಪಿದ 2ನೇ ಭಾರತೀಯ ಎಂಬ ಇತಿಹಾಸ ನಿರ್ಮಿಸಿದ್ದಾರೆ.
1984ರಲ್ಲಿ ಸೋವಿಯತ್ ಕಾರ್ಯಾಚರಣೆಯ ಭಾಗವಾಗಿ ವಿಂಗ್ ಕಮಾಂಡರ್ ರಾಕೇಶ್ ಶರ್ಮಾ ಬಾಹ್ಯಾಕಾಶ ಪ್ರಯಾಣ ಬೆಳೆಸಿದ್ದರು. ಇದಾದ 4 ದಶಕಗಳ ನಂತರ, ಗ್ರೂಪ್ ಕ್ಯಾಪ್ಟನ್ ಶುಕ್ಲಾ ಬಾಹ್ಯಾಕಾಶಕ್ಕೆ ಪ್ರಯಾಣಿಸಿರುವ 2ನೇ ಭಾರತೀಯ ಗಗನಯಾತ್ರಿಯಾಗಿದ್ದಾರೆ.