ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಜಾತಿಗಳ ನಡುವೆ ವಿಷ ಬೀಜ ಬಿತ್ತಲು ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಗಳಿಗೆ ಜಾತಿ ಜನಗಣತಿ ಮಾಡುವ ಅಧಿಕಾರ ಇಲ್ಲ. ಇದು ಗೊತ್ತಿದ್ರೂ ಸಿದ್ದರಾಮಯ್ಯ ಸರ್ಕಾರ ಜಾತಿಗಳ ನಡುವೆ ವಿಷ ಬೀಜ ಬಿತ್ತಲು ಮುಂದಾಗಿದೆ.
ಖರ್ಗೆಯವರೇ ಹೇಳಿದ್ದಾರೆ ಇದು ಔಟ್ಡೇಟೆಡ್ ವರದಿ ಅಂತಾ. ಈಗಲಾದರೂ ರಾಜ್ಯದ ಜಾತಿ ಜನಗಣತಿಗೆ ಇತಿಶ್ರಿ ಹಾಡಲಿ. ಸಿದ್ದರಾಮಯ್ಯ ಜಾತಿಗಳ ನಡುವೆ ಕಂದಕ ಸೃಷ್ಟಿಸಲು ಹೊರಟಿದ್ದಾರೆ. ಕಾಂಗ್ರೆಸ್ ಸರ್ಕಾರದ ಬಳಿ ಕಾಂತರಾಜು ವರದಿಯ ಪ್ರತಿಯೇ ಇಲ್ಲ.
ಜಯಪ್ರಕಾಶ್ ಹೆಗ್ಡೆ ಯಾವ ಆಧಾರದಲ್ಲಿ ವರದಿ ಕೊಟ್ರು ಹಾಗಾದ್ರೆ? ಸಿದ್ದರಾಮಯ್ಯ ವರದಿಯಲ್ಲಿ ಸದುದ್ದೇಶವಂತೂ ಇಲ್ಲ. ಈಗಲಾದರೂ ಸಿದ್ದರಾಮಯ್ಯಗೆ ಭಗವಂತ ಬುದ್ಧಿ ಕೊಡಲಿ, ಕೇಂದ್ರದ ಪರ ಸಿದ್ದರಾಮಯ್ಯ ನಿಲ್ಲಲಿ ಎಂದು ತಿಳಿಸಿದರು.