ಮಂಡ್ಯ; ಸಚಿವ ಕೆ.ಎನ್ .ರಾಜಣ್ಣ ಅವರ ಸೆಪ್ಟೆಂಬರ್ ಕ್ರಾಂತಿ ಹೇಳಿಕೆ ರಾಜ್ಯ ಕಾಂಗ್ರೆಸ್ ನಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ. ಇದರ ನಡುವೆಯೇ ಸಿಎಂ ಅತ್ಯಾಪ್ತನಾಗಿದ್ದು, ಇದೀಗ ಅತೃಪ್ತರ ಬಳಗದಲ್ಲಿ ಗುರುತಿಸಿಕೊಂಡಿರುವ ಬಿ.ಆರ್.ಪಾಟೀಲ್ ವಿಡಿಯೋವೊಂದು ಸಂಚಲನ ಸೃಷ್ಟಿಸಿದೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ ಭೇಟಿ ವೇಳೆ ಬಿ.ಆರ್ .ಪಾಟೀಲ್ ಫೋನ್‌ನಲ್ಲಿ ಯಾರೊಡನೆಯೋ ಮಾತನಾಡುತ್ತಿರುವ ವಿಡಿಯೋವೊಂದು ಹರಿದಾಡುತ್ತಿದ್ದು, ಭಾರೀ ಕೋಲಾಹಲ ಸೃಷ್ಟಿಸಿದೆ.
ಇತ್ತೀಚಿಗಷ್ಟೇ ತಮ್ಮ ಕ್ಷೇತ್ರದ ಅನುದಾನ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರನ್ನು ಭೇಟಿಯಾಗಿ, ಚರ್ಚೆ ನಡೆಸಿದ್ದರು.
ಕಾಂಗ್ರೆಸ್ ಹಿರಿಯ ಶಾಸಕ ಬಿ.ಆರ್ ಪಾಟೀಲ್ ದೂರವಾಣಿ ಮೂಲಕ ಆಪ್ತರೊಡನೆ ಮಾತುಕತೆ ನಡೆಸಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯಗೆ ಸೋನಿಯಾ ಗಾಂಧಿ ಪಸ್ಟ್ ಭೇಟಿ ಮಾಡಿಸಿದವನು ನಾನು, ಅವನು ಗ್ರಹಚಾರ ಚೆನ್ನಾಗಿತ್ತು ಸಿಎಂ ಆದ. ನನ್ನ ಗ್ರಹಚಾರ ಎಂದು ಪರೋಕ್ಷವಾಗಿ ಬೇಸರವ್ಯಕ್ತಪಡಿಸಿದ್ದಾರೆ. ನಮಗೆ ಗಾಡು ಇಲ್ಲ ಫಾದರ್ ಇಲ್ಲ. ಸುರ್ಜೆವಾಲ ಬೇಟಿ ಮಾಡಿ ಮಾತನಾಡಿದ್ದೇನೆ. ಗಂಭೀರವಾಗಿ ನನ್ನ ಮಾತು ಕೇಳಿದ್ದಾರೆ . ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ನೋಡೋಣ ಎಂದಿರುವ ವಿಡಿಯೋ ವೈರಲ್ ಆಗಿದೆ.