Close Menu
Ain Live News
    Facebook X (Twitter) Instagram YouTube
    Thursday, June 26
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಜನರ ಮನಸು ಅರಿಯಲು ಯಾತ್ರೆ ನೆರವಾಗಲಿ: ಹೃತ್ಪೂರ್ವಕವಾಗಿ ಹಾರೈಸುತ್ತೇನೆ ಎಂದು ಬಿಜೆಪಿಗೆ ಸಿದ್ದು ಟಕ್ಕರ್

    By Author AINApril 7, 2025
    Share
    Facebook Twitter LinkedIn Pinterest Email
    Demo

    ‌ಬೆಂಗಳೂರು: ಬೆಲೆ ಏರಿಕೆ, ಅನುದಾನದ ದುರ್ಬಳಕೆ ಆರೋಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಮೈಸೂರಿನಿಂದ ಜನಾಕ್ರೋಶ ಯಾತ್ರೆ ಆರಂಭಸಿದ್ದಾರೆ. ಬಿಜೆಪಿ ನಾಯಕರ ಜನಾಕ್ರೋಶ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಟಕ್ಕರ್‌ ಕೊಟ್ಟಿದ್ದಾರೆ.

    ರಾಜ್ಯ ಬಿಜೆಪಿ ನಾಯಕರಿಗೆ ನಾನು ಶುಭ ಕೋರುತ್ತೇನೆ. ಒಂದು ಸಮರ್ಥ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ವೈಫಲ್ಯ ಮತ್ತು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಲಾಗದ, ಮನೆಮುರುಕುತನದ ಬಗ್ಗೆ ಆಕ್ರೋಶಗೊಂಡಿರುವ ರಾಜ್ಯದ ಜನರ ಮನಸ್ಸು ಅರಿಯಲು ಈ ಯಾತ್ರೆ ನೆರವಾಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುತ್ತೇನೆ ಎಂದು ಕುಟುಕಿದಿದ್ದಾರೆ.

    ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ಇಷ್ಟೊಂದು ಅಸಮರ್ಥ, ನಿರ್ಲಜ್ಜ ಮತ್ತು ಜನವಿರೋಧಿ ವಿರೋಧ ಪಕ್ಷವನ್ನು ರಾಜ್ಯ ಎಂದೂ ಕಂಡಿಲ್ಲ. ಸ್ವಪಕ್ಷೀಯರೇ ಆರೋಪಿಸುವಂತೆ ‘’ಪೇಮೆಂಟ್ ಸೀಟ್ ʼನಲ್ಲಿ ಕೂತಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ರಾಜ್ಯ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆ ಇದೆ? ನಮ್ಮನ್ನು ಪ್ರಶ್ನಿಸುವ ಮೊದಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅವರ ಶಾಸಕ ಮಿತ್ರರು ಕಳೆದೆ ಎರಡು ವರ್ಷಗಳಿಂದ ಮಾಡುತ್ತಿರುವ ಗಂಭೀರ ಸ್ವರೂಪದ ಆರೋಪಗಳಿಗೆ ಉತ್ತರಿಸುವ ದಮ್ಮು ತಾಕತ್ ತೋರಿಸಲಿ.

    ವಿಜಯೇಂದ್ರ ವಿರುದ್ಧ ಸ್ವಪಕ್ಷೀಯರು ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳು ಅವರ ಪಕ್ಷದ ಹೈಕಮಾಂಡಿಗೂ ಮನವರಿಕೆಯಾದಂತಿದೆ. ಪಕ್ಷದೊಳಗಿದ್ದು ಮಾಡುವ ಆರೋಪಗಳಿಂದ ಆಗುವ ಮುಜುಗರದಿಂದ ತಪ್ಪಿಸಿಕೊಳ್ಳಲು ಬಿಜೆಪಿ ಹೈಕಮಾಂಡ್ ಯತ್ನಾಳ್ ಅವರನ್ನು ಪಕ್ಷದಿಂದ ಹೊರಗೆ ಹಾಕಿ, ಅವರಿಂದ ಈಗ ಇನ್ನಷ್ಟು ಆರೋಪಗಳನ್ನು ಮಾಡಿಸುತ್ತಿದೆ. ಅಂತಿಮವಾಗಿ ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸುವುದೇ ಬಿಜೆಪಿ ಹೈಕಮಾಂಡ್ ಉದ್ದೇಶವಾಗಿದೆ.

    ಇದಕ್ಕಾಗಿ ವಿಜಯೇಂದ್ರ ತಮ್ಮ ಕುರ್ಚಿ ಉಳಿಸಿಕೊಳ್ಳಲು ಈ ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದ್ದಾರೆಯೇ ಹೊರತು, ಬೇರೆ ಯಾವ ಸಾರ್ವಜನಿಕ ಹಿತಾಸಕ್ತಿಯ ಸದುದ್ದೇಶ ಖಂಡಿತ ಈ ಯಾತ್ರೆಗೆ ಇಲ್ಲ. ವಿಜಯೇಂದ್ರ ಅವರು ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರದ್ದು ಮಾತ್ರವಲ್ಲ ರಾಜ್ಯದ ಜನತೆಯ ವಿಶ್ವಾಸವನ್ನೂ ಕಳೆದುಕೊಂಡಿದ್ದಾರೆ.

    ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಬಜೆಟ್‌ನ 51,000 ಕೋಟಿ ರೂಪಾಯಿ ಹಣ ನೇರವಾಗಿ ಫಲಾನುಭವಿಗಳನ್ನು ತಲುಪುತ್ತಿದ್ದು, ಅವರೆಲ್ಲರೂ ಸಂತುಷ್ಠರಾಗಿದ್ದಾರೆ. ಈಗ ಅವರು ಬೀದಿಗೆ ಬಂದು ನಮ್ಮ ಪರ ಘೋಷಣೆ ಹಾಕದೆ ಇರಬಹುದು, ಆದರೆ ಅವರೆಲ್ಲರ ಆಶೀರ್ವಾದ ನಮ್ಮ ಸರ್ಕಾರದ ಪರವಾಗಿದೆ. ಮೊದಲ ದಿನದಿಂದಲೂ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಾ ಬಂದಿರುವ ಭಾರತೀಯ ಜನತಾ ಪಕ್ಷದ ಬಡವರು ಮತ್ತು ಮಹಿಳಾ ವಿರೋಧಿ ಧೋರಣೆಯನ್ನು ಅರ್ಥಮಾಡಿಕೊಳ್ಳುವಷ್ಟು ಜನ ಪ್ರಜ್ಞಾವಂತರಾಗಿದ್ದಾರೆ.

    ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ವಿಫಲಗೊಳಿಸುವ ಏಕೈಕ ಉದ್ದೇಶದಿಂದ ರಾಜ್ಯದ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಜೊತೆ ಷಾಮೀಲಾಗಿ ರಾಜ್ಯಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾದ ತೆರಿಗೆ ಪಾಲು ಮತ್ತು ಅನುದಾನಕ್ಕೆ ಕತ್ತರಿ ಹಾಕಿಸಿದ್ದಾರೆ. ರಾಜ್ಯದ ಜನ ತಮ್ಮ ಬೆವರಿನ ಗಳಿಕೆಯಿಂದ ನೀಡುತ್ತಿರುವ ಐದು ಲಕ್ಷ ಕೋಟಿ ರೂಪಾಯಿಗಳಷ್ಟು ತೆರಿಗೆ ಹಣದಲ್ಲಿ ಕೇವಲ 60,000 ಕೋಟಿ ರೂಪಾಯಿ ಮಾತ್ರ ವಾಪಸು ನೀಡುತ್ತಿರುವ ಅನ್ಯಾಯದ ಬಗ್ಗೆ ಆಕ್ರೋಶಗೊಂಡಿದ್ದಾರೆ. ಬಿಜೆಪಿ ಪಕ್ಷದ ಯಾತ್ರೆಯ ಸಮಯದಲ್ಲಿ ಈ ಆಕ್ರೋಶದ ಬಿಸಿ ಕೂಡಾ ಬಿಜೆಪಿ ನಾಯಕರಿಗೆ ತಟ್ಟಲಿದೆ.

    ಕರ್ನಾಟಕದ ಜನರ ಹಿತರಕ್ಷಣೆಯ ಕಿಂಚಿತ್ತಾದರೂ ಕಾಳಜಿ ಈ ಬಿಜೆಪಿ ನಾಯಕರಿಗೆ ಇರುವುದಾದರೆ ಮೊದಲು ಇವರು ಪ್ರಧಾನಮಂತ್ರಿ ನಿವಾಸದ ಎದುರು ಹೋಗಿ ಪ್ರತಿಭಟನೆ ನಡೆಸಬೇಕು. ಕರ್ನಾಟಕವನ್ನು ಶತ್ರು ರಾಜ್ಯದಂತೆ ನೋಡುತ್ತಿರುವ ನರೇಂದ್ರ ಮೋದಿ ಸರ್ಕಾರ ತೆರಿಗೆ ಪಾಲು, ಅನುದಾನ ಹಂಚಿಕೆಯಲ್ಲಿ ಅನ್ಯಾಯ ಮಾಡುತ್ತಿರುವುದು ಮಾತ್ರವಲ್ಲ ಈಗ ಕೇಂದ್ರದಲ್ಲಿ ಕರ್ನಾಟಕದ ದನಿಯನ್ನು ಕುಗ್ಗಿಸಬೇಕೆಂಬ ದುಷ್ಟ ಉದ್ದೇಶದಿಂದ ಕ್ಷೇತ್ರ ಮರುವಿಂಗಡಣೆಯನ್ನು ಮಾಡಲು ಹೊರಟಿದೆ. ಇದರ ವಿರುದ್ಧ ದನಿ ಎತ್ತಬೇಕಾಗಿರುವ ರಾಜ್ಯದಿಂದ ಆರಿಸಿಹೋಗಿರುವ ಬಿಜೆಪಿ ಸಂಸದರು ಬಾಯಿಗೆ ಬೀಗ ಹಾಕಿಕೊಂಡು ಕೇಂದ್ರದ ಗುಲಾಮರಂತೆ ವರ್ತಿಸುತ್ತಿದ್ದಾರೆ.

    ವೈಯಕ್ತಿಕವಾಗಿ ನಾನು ರಾಜ್ಯದಲ್ಲಿ ರಚನಾತ್ಮಕವಾಗಿ ಕಾರ್ಯನಿರ್ವಹಿಸುವ ಸಮರ್ಥ ವಿರೋಧ ಪಕ್ಷ ಇರಬೇಕೆಂದು ಬಯಸುವವನು. ಬಿಜೆಪಿಯವರಂತೆ ರಾಜ್ಯ ಬಿಜೆಪಿ ಮುಕ್ತ ಆಗಬೇಕೆಂದು ಬಯಸುವಷ್ಟು ಕೆಟ್ಟ ಮನಸ್ಸು ನನಗಿಲ್ಲ. ನಮ್ಮ ಆಡಳಿತದಲ್ಲಿ ತಿಳಿದೋ, ತಿಳಿಯದೆಯೋ ತಪ್ಪುಗಳಾಗಿದ್ದರೆ ಅದನ್ನು ನಮ್ಮ ಗಮನಕ್ಕೆ ತರುವುದು ವಿರೋಧ ಪಕ್ಷದ ಮುಖ್ಯ ಕರ್ತವ್ಯವಾಗಿದೆ. ಆದರೆ ರಾಜ್ಯದಲ್ಲಿರುವ ವಿರೋಧ ಪಕ್ಷ ತನ್ನ ಒಳಜಗಳ ಮತ್ತು ಅಸಾಮರ್ಥ್ಯದಿಂದ ರಾಜ್ಯದ ಜನತೆ ಎದುರು ನಗೆಪಾಟಲಿಗೀಡಾಗಿದೆ ಎಂದು ಪ್ರಕಟಣೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಕರ್ನಾಟಕದಲ್ಲಿ ಮಳೆ ಅಬ್ಬರ: ಇಂದು ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!

    June 26, 2025

    ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಬಟ್ಟೆ ಮಾರಾಟ: ಗೋಡೌನ್ ಮೇಲೆ ಖಾಕಿ ದಾಳಿ!

    June 26, 2025

    ಸಾಕ್ಷಿಗಳ ಕೊರತೆ: ಅನೈಸರ್ಗಿಕ ಲೈಂಗಿಕ ಕಿರುಕುಳ ಕೇಸ್ ನಲ್ಲಿ ಸೂರಜ್ ರೇವಣ್ಣಗೆ ಬಿಗ್ ರಿಲೀಫ್!

    June 26, 2025

    Indian railways: RAC, ವೇಟಿಂಗ್ ಲಿಸ್ಟ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಿಂದ ಭಾರೀ ಬದಲಾವಣೆ

    June 26, 2025

    ಶೀಘ್ರದಲ್ಲೇ ರಾಜ್ಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ: ಬಿವೈ ವಿಜಯೇಂದ್ರ!

    June 26, 2025

    ಬಳಸದ ವಿದ್ಯುತ್​ಗೆ ಗ್ರಾಹಕರು ತೆರಿಗೆ ಕಟ್ಟಬೇಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು!

    June 26, 2025

    Home Loan: ಕಡಿಮೆ ಬಡ್ಡಿ ದರದಲ್ಲಿ ಗೃಹ ಸಾಲ ಬೇಕೇ..? ಹಾಗಾದ್ರೆ ಈ ಬ್ಯಾಂಕ್’ಗಳ ಆಫರ್ ಬಗ್ಗೆ ತಿಳಿಯಿರಿ

    June 26, 2025

    ಮಳೆ ಅಬ್ಬರ: ಕರ್ನಾಟಕದ ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ!

    June 25, 2025

    ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ: DCM ಡಿಕೆಶಿ ಭೇಟಿ ಮಾಡಿ ಚರ್ಚಿಸಿದ ಬಿ ಆರ್ ಪಾಟೀಲ್!

    June 25, 2025

    ರಾಜ್ಯ ಸರ್ಕಾರದ ಮಹತ್ವದ ಆದೇಶ: ಎಲ್ಲಾ ಇಲಾಖೆಗಳ ಆಡಳಿತದಲ್ಲಿ ಕನ್ನಡ ಕಡ್ಡಾಯ!

    June 25, 2025

    ವೃದ್ಧಾಶ್ರಮದಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ: ಹೆತ್ತ ಮಗನಿಂದ ಮನನೊಂದು ಸೂಸೈಡ್?

    June 25, 2025

    ಇನ್ಮುಂದೆ ಎಲ್ಲಾ ಇಲಾಖೆಗಳಲ್ಲೂ ‘ಕನ್ನಡ ಬಳಕೆ’ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

    June 25, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.