ಬೆಂಗಳೂರು:- ರಾಜ್ಯ ಸರ್ಕಾರದ 40% ಕಮಿಷನ್ ಆರೋಪದ ತನಿಖೆಗೆ ಎಸ್ಐಟಿ ರಚಿಸಲು ತೀರ್ಮಾನಿಸಿರುವ ಕುರಿತು ಸಂಸದ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಹುಬ್ಬಳ್ಳಿ: ತಮ್ಮ ಉಳಿವಿಗಾಗಿ ಜಾನಾಕ್ರೋಶ ಯಾತ್ರೆ- ಬಿಜೆಪಿ ವಿರುದ್ಧ ಸೌಮ್ಯ ರೆಡ್ಡಿ ಕಿಡಿ!
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, 40% ಭ್ರಷ್ಟಾಚಾರದ ಬಗ್ಗೆ ಸುಳ್ಳು ಅಪಪ್ರಚಾರ ಮಾಡಿದ ಪ್ರಕರಣಕ್ಕೆ ಈಗಾಗಲೇ ಆಯೋಗ ರಚನೆ ಮಾಡಿದ್ದರು. ಆ ಕಮಿಷನ್ ವರದಿಯಲ್ಲಿ ಏನಿದೆ ಎನ್ನುವುದು ಸಾರ್ವಜನಿಕರಿಗೆ ಗೊತ್ತಾಗಬೇಕು. ಈ ಸರ್ಕಾರ ಕದ್ದು ಮುಚ್ಚಿ ಯಾಕೆ ಮಾಡುತ್ತಾರೆ. ಕಳೆದ ಎರಡು ವರ್ಷದಲ್ಲಿ ಈ ಸರ್ಕಾರದ ವಿರುದ್ಧ 60% ಆರೋಪ ಕೇಳಿ ಬಂದಿದೆ. ಅದನ್ನೂ ಸೇರಿಸಿ ಎಸ್ಐಟಿ ತನಿಖೆಗೆ ಕೊಡಲಿ ಎಂದು ಹೇಳಿದರು.
ರಾಜ್ಯ ಸರ್ಕಾರದಲ್ಲಿ 60% ಭ್ರಷ್ಟಾಚಾರ ನಡೆಯುತ್ತಿದೆ ಎಂದು ಪಿಡಬ್ಲೂಡಿ, ಅಬಕಾರಿ, ಎಲೆಕ್ಟ್ರಿಕ್ ಕಂಟ್ರಾಕ್ಟರ್ ಅಸೋಸಿಯೇಷನ್ನವರು ಬಹಿರಂಗ ಆರೋಪ ಮಾಡಿದ್ದಾರೆ. ತಮ್ಮ ಸರ್ಕಾರದಲ್ಲಿ ನಡೆದಿರುವ ಆರೋಪದ ಸಮೇತ ತನಿಖೆ ಮಾಡಬೇಕು. ರಾಜಕಿಯ ದ್ವೇಷದಿಂದ ನಮ್ಮ ಮೇಲೆ ಸುಳ್ಳು ಪ್ರಚಾರ ಮಾಡಿರುವುದಕ್ಕೆ ಎಲ್ಲಿ ದಾಖಲೆ ಸಿಗುತ್ತದೆ. ಕಮಿಷನ್ ಕೇಳಿದರೆ ಲೋಕಾಯುಕ್ತಕ್ಕೆ ಕಂಪ್ಲೆAಟ್ ಕೊಡಿ ಎಂದು ಈಗ ಸಿಎಂ ಹಾಗೂ ಡಿಸಿಎಂ ಅವರು ಹೇಳುತ್ತಾರೆ. ನಾವು ಇದ್ದಾಗಲೂ ಲೋಕಾಯುಕ್ತಕ್ಕೆ ದೂರು ಕೊಡಿ ಅಂತ ಹೇಳಿದ್ದೆ ಕೊಡಲಿಲ್ಲ ಎಂದು ಹೇಳಿದರು.
ಗುತ್ತಿಗೆದಾರರು ಮಾಡಿರುವ ಕಾಮಗಾರಿಗೆ ಹಿರಿತನದ ಆಧಾರದಲ್ಲಿ ಹಣ ಬಿಡುಗಡೆ ಮಾಡುತ್ತಿಲ್ಲ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿ, ಮಾಡಿದ ಕೆಲಸಕ್ಕೆ ಕೊಡಲು ಹಣ ಇಲ್ಲ. ಹೀಗಾಗಿ ಗುತ್ತಿಗೆದಾರರು ಟೆಂಡರ್ ಆಗಿದ್ದರೂ ಕೆಲಸ ಮಾಡಲು ಮುಂದೆ ಬರುತ್ತಿಲ್ಲ ಎಂದು ಹೇಳಿದರು.