ಬೆಂಗಳೂರು: ಪಾಕಿಸ್ತಾನಕ್ಕಿಂತ ಮೊದಲು ದೇಶದೊಳಗಿರುವ ಸ್ಲೀಪರ್ ಸೆಲ್‌ಗಳನ್ನು ಮಟ್ಟ ಹಾಕಬೇಕಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪಾಕಿಸ್ತಾನಕ್ಕಿಂತ ಮೊದಲು ದೇಶದೊಳಗಿರುವ ಸ್ಲೀಪರ್ ಸೆಲ್‌ಗಳನ್ನು ಮಟ್ಟ ಹಾಕಬೇಕಿದೆ.
ಅವರಿಗೆ ನೆರವು ಕೊಡುವುದು, ಜಾಮೀನು ಕೊಡಿಸುವುದು, ಕಾನೂನು ಸಹಾಯ ಮಾಡುವುದು ನಡೆಯುತ್ತಿದೆ. ಇಂತಹವರನ್ನು ಸಹ ಬಿಡಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟವಾಗಿ ಹೇಳಿದ್ದಾರೆ. ಕಾಂಗ್ರೆಸ್ ನಾಯಕರು ದೇಶದ ಯೋಧರ ಬಗ್ಗೆ ಅನುಮಾನ ವ್ಯಕ್ತಪಡಿಸಿದರೆ,
ಮತ್ತೆ ಇವರಿಗೆ ಯಾರ ಮೇಲೆ ನಂಬಿಕೆ ಇದೆ? ಇಡೀ ದೇಶ ಒಂದಾಗಿ ಭಯೋತ್ಪಾದಕ ದಾಳಿಯನ್ನು ಖಂಡಿಸಬೇಕು ಎಂದು ಅಶೋಕ್ ಹೇಳಿದರು. ಜನತೆಯ ಮೇಲೆ ಕಾಂಗ್ರೆಸ್ ಸರ್ಕಾರ ಭರಪೂರ ತೆರಿಗೆಗಳನ್ನು ಹೇರಿದೆ. ಪ್ರತಿ ಮನೆಗಳಿಗೆ ಹೋಗಿ ಕರಪತ್ರಗಳನ್ನು ಹಂಚಿ ಜಾಗೃತಿ ಮೂಡಿಸಲಾಗುವುದು ಎಂದರು.