ಖ್ಯಾತ ಗಾಯ ಸೋನು ನಿಗಮ್ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕನ್ನಡ ಭಾಷೆ ಹಾಗೂ ಕನ್ನಡ ಹಾಡುಗಳ ಬಗ್ಗೆ ಪ್ರೀತಿಯಿಂದ ಮಾತನಾಡುತ್ತಲೇ ಸೋನು ನಿಗಮ್ ವಿವಾದತ್ಮಾಕ ಹೇಳಿಕೆ ಕೊಟ್ಟಿದ್ದಾರೆ. ಬೆಂಗಳೂರಿನನಲ್ಲಿ ನಡೆದ ಸಂಗೀತ ಕಾರ್ಯಕ್ರೆಮದಲ್ಲಿ ಅವರು ಮಾತನಾಡಿದ ಮಾತುಗಳು ಕನ್ನಡಿಗರನ್ನು ಕೆರಳಿಸಿದೆ.
ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಕನ್ನಡ ಹಾಡು ಹಾಡುವಂತೆ ಸೋನು ನಿಗಮ್ ಗೆ ಅಭಿಮಾನಿಗಳು ಮನವಿ ಮಾಡಿದರು. ಈ ವೇಳೆ . ಸೋನು ನಿಗಮ್ ತಮ್ಮ ಹಾಡನ್ನು ಅರ್ಧಕ್ಕೆ ನಿಲ್ಲಿಸಿ, ತಮಗೆ ಕನ್ನಡ ಮೇಲಿರುವ ಪ್ರೀತಿ, ಇಲ್ಲಿನ ಜನರ ಮೇಲಿರುವ ಗೌರವದ ಬಗ್ಗೆ ಹೇಳಿಕೊಂಡಿದ್ದಾರೆ. ಅಲ್ಲದೇ ಮಾತಾಡುವ ಭರದಲ್ಲಿ ಪಹಲ್ಗಾಮ್ ದಾಳಿ ಹಾಗೂ ಕರ್ನಾಟಕದ ಬಗ್ಗೆ ಮಾತಾಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.
ನಾನು ಬೇರೆ ಬೇರೆ ಭಾಷೆಗಳಲ್ಲಿ ಹಾಡಿದ್ದೇನೆ. ಆದರೆ ದಿ ಬೆಸ್ಟ್ ಸಾಂಗ್ಸ್ ಹಾಡಿರೋದು ಹೆಚ್ಚು ಕನ್ನಡದಲ್ಲಿ. ಕರ್ನಾಟಕಕ್ಕೆ ಬರುವಾಗ ತುಂಬಾ ಖುಷಿಯಾಗುತ್ತೆ. ತುಂಬಾ ಆಸೆಯಿಂದಲೇ ಇಲ್ಲಿ ಬರ್ತೇನೆ. ಸಾಮಾನ್ಯವಾಗಿ ಕನ್ನಡ ಸಾಂಗ್ಸ್ ಹಾಡಿ ಅಂತ ಕೇಳ್ತಾರೆ. ಯಾವುದೇ ಕಾರ್ಯಕ್ರಮಕ್ಕೆ ಹೋದಾಗಲೂ, ಯಾರಾದರೂ ಕನ್ನಡ ಎಂದು ಕೂಗಿದಾಗ ಅವರಿಗಾಗಿ ಒಂದು ಸಾಲು ಕನ್ನಡ ಹಾಡನ್ನಾದರೂ ಹಾಡಿರುತ್ತೇನೆ. ಆದರೆ ಆ ಹುಡುಗ ಕನ್ನಡ, ಕನ್ನಡ ಎಂದು ಕಿರುಚಿಕೊಂಡು ಕೇಳಿದ್ದು ನನಗೆ ಇಷ್ಟವಾಗಲಿಲ್ಲ. ಇದೇ ಕಾರಣದಿಂದ ಪಹಲ್ಗಾಮ್ ದಾಳಿಯಾಗಿದ್ದು ಎಂದು ಹೇಳಿ ವಿವಾದಾತ್ಮಕ ಹೇಳಿಕೊಟ್ಟಿದ್ದಾರೆ.
ಕನ್ನಡ ಹಾಡು ಅಂದಿದ್ದಕ್ಕೂ ಪಹಲ್ಗಾಮ್ ದಾಳಿಗೂ ಏನ್ ಸಂಬಂಧ ಅನ್ನೋದು ಗೊತ್ತಿಲ್ಲ. ಸೋನು ನಿಗಮ್ ಈ ಮಾತಿ ಕರವೇ ನಾರಾಯಣ ಗೌಡ್ರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋನು ನಿಗಮ್ ನೀಡಿರುವ ಹೇಳಿಕೆ ಕನ್ನಡಿಗರನ್ನು ಕೀಳಾಗಿ ಕಂಡಿರುವುದು ಮಾತ್ರವಲ್ಲ, ಕನ್ನಡಿಗರನ್ನು ದೇಶದ್ರೋಹಿಗಳೆಂದು ಬಿಂಬಿಸಿ ಅವರನ್ನು ಖಳನಾಯಕರನ್ನಾಗಿ ಮಾಡುವ ಹುನ್ನಾರ ಹೊಂದಿದೆ. ಹೀಗಾಗಿ ಅವನ ಮೇಲೆ ಈ ಕೂಡಲೇ ದೂರು ದಾಖಲಾಗಬೇಕು. ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಹೋರಾಟಕ್ಕೆ ಕೈ ಹಾಕಬೇಕಾಗುತ್ತದೆ ಎಂದು ಎಚ್ಚರಿಸುತ್ತೇನೆ. ಇಂಥ ಕೃತಘ್ನರನ್ನು ಕರ್ನಾಟಕದ ನೆಲದಲ್ಲಿ ಅನ್ನ ಹಾಕಿ ಸಾಕುವುದನ್ನು ಇನ್ನು ಮುಂದಾದರೂ ನಾವು ಕೈಬಿಡಬೇಕು. ಕರ್ನಾಟಕ ಪೊಲೀಸರು ಈ ಕೂಡಲೇ ಇವನ ಮೇಲೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಬಂಧಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.