ಬೆಂಗಳೂರು: ಕನ್ನಡಾಭಿಮಾನವನ್ನು ಪಹಲ್ಗಾಮ್ ಘಟನೆಗೆ ತಳುಕು ಹಾಕಿದ ಆರೋಪಕ್ಕೆ ಸಂಬಂಧ ಪಟ್ಟಂತೆ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಗಾಯಕ ಸೋನು ನಿಗಮ್ ರಿಂದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿಲಾಗಿದೆ. ಬೆಂಗಳೂರಿನ ಅವಲಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರ ಏಕಸದಸ್ಯ ಪೀಠದಲ್ಲಿ ಇಂದು ವಿಚಾರಣೆ ನಡೆಯಲಿದೆ.
ವಿಜ್ಞಾನಿಗಳನ್ನೇ ಅಚ್ಚರಿಗೊಳಿಸಿದೆ ಈ ಹಣ್ಣು..! ಎಷ್ಟೇ ಗಂಭೀರ ಕಾಯಿಲೆಯಾಗಿದ್ರೂ ಅದರಿಂದ ಸಿಗಲಿದೆ ಮುಕ್ತಿ
ಸೋನು ನಿಗಮ್ ಅರ್ಜಿಯಲ್ಲಿ ದೂರುದಾರ ಕರ್ನಾಟಕ ರಕ್ಷಣಾ ವೇದಿಕೆಯ (ನಾರಾಯಣಗೌಡ ಬಣ) ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಟಿ ಎ ಧರ್ಮರಾಜ ಮತ್ತು ರಾಜ್ಯ ಸರ್ಕಾರವನ್ನು ಪ್ರತಿವಾದಿಯನ್ನಾಗಿಸಲಾಗಿದೆ.
ಮೇ 5ರಂದು ಎಫ್‌ಐಆರ್ ಸಂಬಂಧ ತನಿಖೆಗೆ ಹಾಜರಾಗುವಂತೆ ಗಾಯಕ ಸೋನು ನಿಗಮ್‌ಗೆ ಅವಲಹಳ್ಳಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸೋನು ನಿಗಮ್ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ಏಪ್ರಿಲ್ 25 ಮತ್ತು 26ರಂದು ಸೋನು ನಿಗಮ್ ಅವರು ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯಲ್ಲಿ ನಡೆದಿದ್ದ ಸಂಗೀತ ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ ಮತ್ತು ಕನ್ನಡಿಗರ ಭಾವನೆ ಕೆರಳಿಸುವ ಹೇಳಿಕೆ ನೀಡಿದ್ದಾರೆ ಎಂದು ಮೇ 2ರಂದು ದೂರು ನೀಡಲಾಗಿತ್ತು. ಇದನ್ನು ಆಧರಿಸಿ ಪೊಲೀಸರು ಮೇ 3ರಂದು ಎಫ್‌ಐಆರ್ ದಾಖಲಿಸಿದ್ದಾರೆ.