ಮಾತು ಬರದ, ಕಿವಿನೂ ಕೇಳದ ವಿಶೇಷ ನಟಿ ಅಭಿನಯ ತಮ್ಮ 15 ವರ್ಷದ ಪ್ರೀತಿಗೆ ಮದುವೆ ಮುದ್ರೆ ಒತ್ತಿದ್ದಾರೆ. ತಮ್ಮ ಬಹುಕಾಲದ ಗೆಳೆಯ ವೇಗೇಶನಾ ಕಾರ್ತಿಕ್ ಜೊತೆ ಸಪ್ತಪದಿ ತುಳಿದಿದ್ದಾರೆ.ಹುಡುಗರು ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್ ತಂಗಿ ಪಾತ್ರದಲ್ಲಿ ನಟಿಸಿದ್ದ ಅಭಿನಯ ನಟಿಸಿದ್ದರು. ಕನ್ನಡ ಮಾತ್ರ ತಮಿಳು, ತೆಲುಗು, ಮಲಯಾಳಂ ಭಾಷೆಯ ಹಲವಾರು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.
ಅಭಿನಯ ಪತಿ ವೇಗೇಶನಾ ಕಾರ್ತಿಕ್ ಕನ್‌ಸ್ಟ್ರಕ್ಷನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಚೆನ್ನೈನಲ್ಲಿ ಹುಟ್ಟಿ ಬೆಳೆದ ಅಭಿನಯ ಹಲವು ಭಾಷೆ ಚಿತ್ರಗಳಲ್ಲಿ ನಟಿಸಿದ್ದಾರೆ.
ತಮ್ಮ ಮದುವೆ ಫೋಟೋಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಹೊಸ ಜೋಡಿಗೆ ಶುಭಾಶಯ ತಿಳಿಸುತ್ತಿದ್ದಾರೆ.