ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಗೋಕುಲ್ ರಸ್ತೆಯ ಲೋಹಿಯಾ ನಗರದಲ್ಲಿರುವ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಗೆ ಜಾರ್ಖಂಡ್ ನಲ್ಲಿ ಸಿಎಸ್ ಆರ್ ಅನುದಾನದಲ್ಲಿ ನಿರ್ಮಾಣಕ್ಕೆ ಕಾರಣ ಎಂದು ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಹೇಳಿದರು.
ಹುಬ್ಬಳ್ಳಿಯ ಲೋಹಿಯಾ ನಗರದಲ್ಲಿನ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಕಾಮಗಾರಿ ಪ್ರಗತಿ ಪರಿಶೀಲನೆ ನಂತರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು,ಧಾರವಾಡ ಜಿಲ್ಲೆಯಲ್ಲಿ 2019 ರಲ್ಲಿ ಬಹಳ ವಿರೋಧದ ನಡುವೆ ಈ ಭಾಗದಲ್ಲಿ ಜಾಗೆ ಗುರುತಿಸಿ ಕ್ರೀಡಾ ಸಂಕೀರ್ಣ ನಿರ್ಮಾಣ ಮಾಡಲಾಗಿದ್ದು,
Red Blood Cells: ದೇಹದಲ್ಲಿ ಕೆಂಪು ರಕ್ತ ಕಣಗಳ ಸಂಖ್ಯೆ ಹೆಚ್ಚಿಸಲು ಈ ಆಹಾರ ಪದಾರ್ಥ ಸೇವಿಸಿ!
ಇನ್ನು ಆರು ತಿಂಗಳಲ್ಲಿ ಇದನ್ನು ಲೋಕಾರ್ಪಣೆ ಮಾಡಲಾಗುವುದು ಎಂದ ಅವರು ಇದರಲ್ಲಿ ಈಜುಕೊಳ, ಪುಟ್ ಬಾಲ್, ವಾಲಿಬಾಲ್ ಸೇರಿದಂತೆ ಇಂಡೋರ್ ಹಾಗೂ ಔಟ್ ಡೋರ್ ಗೇಮ್ ಗಳ ಸಂಕೀರ್ಣ ಆಗಿದೆ. ರಾಜ್ಯ ವಿಧಾನ ಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ವೇಳೆ ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿದ ಸಚಿವರು ಹಾಗೂ ಶಾಸಕರು ಮಾಹಿತಿ ಪಡೆದುಕೊಂಡರು.
ಇನ್ನೂ ಸ್ಮಾರ್ಟ್ ಸಿಟಿಯ ಟೈಮ್ ಬಾಂಡ್ ಮುಗಿದಿದ್ದರೂ ಕೂಡ ಕಾಮಗಾರಿ ಪ್ರಗತಿಯಲ್ಲಿರುವ ಬಗ್ಗೆ ಹಾಗೂ ಕ್ರೀಡೆಗೆ ಪೂರಕವಾದ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.