ಬೆಂಗಳೂರು:- ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಪಂದ್ಯದ ಸಂಭ್ರಮಾಚರಣೆಯಲ್ಲಿ ಉಂಟಾದ ಕಾಲ್ತುಳಿತದಲ್ಲಿ 11 ಅಭಿಮಾನಿಗಳು ಮೃತಪಟ್ಟ ಘಟನೆಯಿಂದ ಕಾಂಗ್ರೆಸ್ ಹೈಕಮಾಂಡ್ ಆಕ್ರೋಶಗೊಂಡಿದೆ. ದುರಂತದ ಸಂಪೂರ್ಣ ಮಾಹಿತಿ ನೀಡುವಂತೆ ತಿಳಿಸಲಾಗಿದೆ. ಇದರ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಇಂದು ಬೆಳಿಗ್ಗೆ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ.
ಡಿಜಿಟಲ್ ಅರೆಸ್ಟ್ ನಿಂದ ಶ್ರೀಲಂಕಾದ ಕೆಸಿನೊ ಗೆ ಹಣ: ತನಿಖೆಯಲ್ಲಿ ಸ್ಪೋಟಕ ಮಾಹಿತಿ ರಿವೀಲ್!
ಕಾಲ್ತುಳಿತ ದುರಂತ ಇಡೀ ದೇಶವೇ ಕರ್ನಾಟಕದತ್ತ ತಿರುಗಿ ನೋಡುವಂತೆ ಮಾಡಿತ್ತು. ಆರ್ಸಿಬಿ ಗೆದ್ದ ಸಂಭ್ರಮದಲ್ಲಿ ಬಂದಿದ್ದ ಅಭಿಮಾನಿಗಳ ಪೈಕಿ 11 ಜನ ಉಸಿರು ಗಟ್ಟಿ ಸತ್ತು ಹೋಗಿದ್ದರು. ಇದೇ ಘೋರ, ರಾಜ್ಯ ಸರ್ಕಾರಕ್ಕೆ ದೊಡ್ಡ ಇಕ್ಕಟ್ಟಿಗೆ ಸಿಲುಕಿಸಿದೆ. ತನಿಖೆ ನಡೆಯುತ್ತಿರುವ ಹೊತ್ತಲ್ಲೇ ವಿಪಕ್ಷಗಳ ದಾಳಿ ಕೂಡ ಗಾಯದ ಮೇಲೆ ಬರೆ ಎಳೆದಂತಾಗಿದೆ. ಜೊತೆಗೆ ರಾಷ್ಟ್ರಮಟ್ಟದಲ್ಲೂ ಸರ್ಕಾರಕ್ಕೆ ಆರ್ಸಿಬಿ ಕಾಲ್ತುಳಿತ ಕಪ್ಪು ಚುಕ್ಕೆಯಾಗಿದೆ. ಹೀಗಾಗಿ ಕೈ ಹೈಕಮಾಂಡ್ ದುರಂತದ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.
ಚಿನ್ನಸ್ವಾಮಿ ದುರಂತ, ರಾಷ್ಟೀಯ ಮಟ್ಟದಲ್ಲೂ ಕರ್ನಾಟಕ ಸರಕಾರಕ್ಕೆ ಛೀಮಾರಿ ಜೊತೆ ಮುಜುಗರಕ್ಕೂ ಕಾರಣವಾಗಿತ್ತು. ಇದೇ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ದ ಕಾಂಗ್ರೆಸ್ ಹೈಕಮಾಂಡ್ ಅಸಮಾಧಾನಗೊಂಡಿತ್ತು. ಘಟನೆ ನಡೆದ ದಿನವೇ ಪ್ರಾಥಮಿಕ ಮಾಹಿತಿ ಪಡೆದಿದ್ದ ವರಿಷ್ಠರು, ಈಗ ಸಂಪೂರ್ಣ ವರದಿ ಪಡೆಯಲಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್, ರಾಹುಲ್ ಗಾಂಧಿಯನ್ನ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.