ಬೆಂಗಳೂರು:- ಬರೋಬ್ಬರಿ 18ನೇ ವರ್ಷಕ್ಕೆ ಚೊಚ್ಚಲ IPL ಪ್ರಶಸ್ತಿಯನ್ನು RCB ಗೆದ್ದು ಕೊಂಡಿದೆ. ಇದು RCB ಅಭಿಮಾನಿಗಳ ಖುಷಿಯ ಪಾರವೇ ಇರಲಿಲ್ಲ. ಆದರೆ ಇದೇ ಸಂಭ್ರಮ ಹೆಚ್ಚು ಹೊತ್ತು ಉಳಿಯಲಿಲ್ಲ ನೋಡಿ. ಕಪ್ ಗೆದ್ದ ಕೆಲವೇ ಗಂಟೆಗಳಲ್ಲಿ ಸೂತಕದ ವಾತವರಣವೇ ಸೃಷ್ಟಿ ಆಯ್ತು.
ನಿತ್ಯ ಖಾಲಿ ಹೊಟ್ಟೆಯಲ್ಲಿ ಒಂದು ಚಿಕ್ಕ ಪೀಸ್ ಬೆಳ್ಳುಳ್ಳಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?
ತಂಡದ ವಿಕ್ಟರಿ ಸೆಲೆಬ್ರೇಷನ್ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ 11 ಮಂದಿ ಬಲಿಯಾಗಿದ್ದಾರೆ. ಈ ಪ್ರಕರಣದ ತನಿಖೆ ನಡೆಸಿರುವ ಇದೀಗ ಯುಡಿಆರ್ ಬದಲಿಗೆ ಎಫ್‌ಐಆರ್ ದಾಖಲಿಸಿದ್ದಾರೆ. ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ಮತ್ತು ಡಿಎನ್‌ಎ ಇವೆಂಟ್ ಮ್ಯಾನೇನ್ಮೆಂಟ್ ಸಂಸ್ಥೆ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 105 (ಮಾನವ ನರಹತ್ಯೆ), BNS 106, 118(1), 118(2), 190, 132, 125A,125(B) ಅಡಿಯಲ್ಲಿ ಕೇಸ್ ದಾಖಲು ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಈ ಮೊದಲು ಯುಡಿಆರ್ ದಾಖಲಿಸಲಾಗಿತ್ತು, ಇದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಈ ಬಗ್ಗೆ ವಿಸ್ತೃತ ವರದಿ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್ ಇಲಾಖೆ ಎಫ್‌ಐಆರ್ ದಾಖಲಿಸಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯನ್ನು ಹೊಣೆಗಾರರನ್ನಾಗಿ ಮಾಡಿಲ್ಲ. ಪೊಲೀಸ್ ಇಲಾಖೆಯ ಅನುಮತಿ ಪಡೆಯದೇ ಸಾಮಾಜಿಕ ಜಾಲತಾಣದಲ್ಲಿ ಜೂ. 4 ರಂದು ಆರ್‌ಸಿಬಿ ತಂಡದ ವಿಕ್ಟರಿ ಪರೇಡ್ ಇದೆ ಅಂತ ಪ್ರಕಟಣೆ ನೀಡಿ, ಆ ಮೂಲಕ ಲಕ್ಷಾಂತರ ಜನರು ಜಮಾವಣೆಯಾಗಲು ನೇರ ಕಾರಣವಾಗಿರುವ ಆರ್‌ಸಿಬಿ ಮ್ಯಾನೇಜ್ ಮೆಂಟ್ ಅನ್ನು ಹೊಣೆಗಾರರನ್ನಾಗಿಸಿಲ್ಲ. ಇನ್ನು, ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ನಿರ್ವಹಿಸುವ ಜವಾಬ್ದಾರಿ ಹೊತ್ತಿದ್ದ ಡಿಎನ್ಎ ಇವೆಂಟ್ ಮ್ಯಾನೇಜ್ ಮೆಟ್ ಸಂಸ್ಥೆಯನ್ನು ಹೊಣೆಗಾರರನ್ನಾಗಿ ಮಾಡಿಲ್ಲ. ಇದು ಅನುಮಾನಕ್ಕೆ ಕಾರಣವಾಗಿದೆ.