ಬೆಂಗಳೂರು: ಬೆಂಗಳೂರು: ಆರ್ಸಿಬಿ ಗೆಲುವಿನ ಸಂದರ್ಭದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ದುರಂತವು ರಾಜ್ಯದಾದ್ಯಂತ ಆಘಾತವನ್ನುಂಟು ಮಾಡಿದೆ. ಈ ಘಟನೆಯ ಕುರಿತು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ನ್ಯಾಯಮೂರ್ತಿ ಮೈಕೆಲ್ ಕುನ್ಹಾ ಆಯೋಗಕ್ಕೆ ಕಾಲ್ತುಳಿತ ಪ್ರಕರಣದ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ನಿತ್ಯ ನೀವು ಟಾಯ್ಲೆಟ್ ಗೆ ಹೋದ ಬಳಿಕ ಈ ಲಕ್ಷಣಗಳು ಕಾಣುತ್ತಾ!? ಹಾಗಿದ್ರೆ ಇದು ಹೊಟ್ಟೆ ಕ್ಯಾನ್ಸರ್!
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಸ್ಟೀಸ್ ಮೈಕೆಲ್ ಕುನ್ಹಾ ಆಯೋಗಕ್ಕೆ ಪ್ರಕರಣದ ಪರಿಶೀಲನೆ ಜವಾಬ್ದಾರಿ ನೀಡಲಾಗಿದ್ದು, ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಸದ್ಯ ಜಸ್ಟೀಸ್ ಮೈಕೆಲ್ ಕುನ್ಹಾ ಆಯೋಗವು ಚಾಮರಾಜನಗರದ ಆಕ್ಸಿಜನ್ ದುರಂತ ಪ್ರಕರಣದ ಬಗ್ಗೆ ವಿಚಾರಣೆ ಮಾಡುತ್ತಿದೆ.
ಆದರೆ ಅದಕ್ಕೂ ಮೊದಲು ಬೆಂಗಳೂರು ಕಾಲ್ತುಳಿತ ದುರಂತದ ವರದಿ ನೀಡುವಂತೆ ಸರ್ಕಾರ ಸೂಚಿಸಿದೆ. ಬಳಿಕ ಚಾಮರಾಜನಗರ ಆಕ್ಸಿಜನ್ ದುರಂತದ ಕೇಸ್ ಪರಿಶೀಲನೆಗೆ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಆಗಸ್ಟ್ 31ರವರೆಗೆ ಕುನ್ಹಾ ಆಯೋಗದ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.