ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ದುರಂತ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಕಾಲ್ತುಳಿತ ದುರಂತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಕಮಿಷನರ್ ಸೇರಿ 5 ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಇನ್ನು ಇದೀಗ ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿಯಾಗಿದ್ದ ಗೋವಿಂದರಾಜ್ ಅವರಿಗೆ ಗೇಟ್ಪಾಸ್ ನೀಡಲಾಗಿದೆ.
ಹುದ್ದೆಯಿಂದ ತಕ್ಷಣವೇ ಬಿಡುಗಡೆ ಮಾಡಿ ಆದೇಶ ಮಾಡಲಾಗಿದೆ. ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ತಕ್ಷಣದಿಂದ ಬಿಡುಗಡೆ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಆದೇಶ ಹೊರಡಿಸಿದ್ದಾರೆ.
ನಿತ್ಯ ಖಾಲಿ ಹೊಟ್ಟೆಯಲ್ಲಿ ಒಂದು ಚಿಕ್ಕ ಪೀಸ್ ಬೆಳ್ಳುಳ್ಳಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?
ಗೋವಿಂದರಾಜ್ ಅವರು ಜೂನ್ 1, 2023 ರಿಂದ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು. ಆರ್ಸಿಬಿ ಆಟಗಾರರಿಗೆ ವಿಧಾನಸೌಧದಲ್ಲಿ ಸನ್ಮಾನ ಮಾಡುವಂತೆ ಸಿದ್ದರಾಮಯ್ಯನವರಿಗೆ ಒತ್ತಡ ಹೇರಿದ್ದೇ ಗೋವಿಂದರಾಜ್ ಎಂಬ ಆರೋಪ ಈಗ ಕೇಳಿ ಬಂದಿದೆ.