ಬೆಂಗಳೂರು: ಐಪಿಎಲ್ ಕಿಂಗ್ RCB ತಂಡಕ್ಕೆ ಸನ್ಮಾನ, ಅಭಿನಂದನೆಗಳ ಮಹಾಪೂರ ಹರಿದು ಬರುತ್ತಿದೆ. ಬೆಂಗಳೂರಿನಲ್ಲಿ ಇಂದು ಆರ್ಸಿಬಿ ವಿಜಯೋತ್ಸವ ನಡೆಯಲಿದ್ದು, ಈಗಾಗಲೇ ಆರ್ಸಿಬಿ ತಂಡದ ಆಟಗಾರರು ಬೆಂಗಳೂರಿಗೆ ಆಗಮಿಸಿದ್ದಾರೆ.
ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ ಬಳಿ ನೂಕು ನುಗ್ಗಲು ಉಂಟಾಗಿದ್ದು, ಯುವಕನೋರ್ವನಿಗೆ ಕಾಲು ಮುರಿತವಾಗಿದೆ. ಗೇಟ್ ನಂಬರ್ 6ರ ಬಳಿ ಗೇಟ್ ಹತ್ತಲು ಹೋದ ಯುವಕ ಬಿದ್ದು ಕಾಲು ಮುರಿದುಕೊಂಡಿದ್ದಾನೆ.
ದೇಹಕ್ಕೆ ಒಳ್ಳೆಯದು ಅಂತ ಹೆಚ್ಚು ಖರ್ಜೂರ ತಿನ್ನೋ ಮುನ್ನ ಹುಷಾರ್! ಈ ಭಾಗಕ್ಕೆ ಹಾನಿಕಾರಕ!
ಜನರನ್ನು ಕಂಟ್ರೋಲ್ ಮಾಡಲು ಸಾಧ್ಯವಾಗದೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ನೂಕುನುಗ್ಗಲಿನಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಪೊಲೀಸರು ತಮ್ಮ ಜೀಪ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.