ಬೆಂಗಳೂರು: ಈ ಭಾರಿ ಕರ್ನಾಟಕದಲ್ಲಿ ವಿಪರೀತ ಬಿಸಿಲು ಆರಂಭವಾಗಿದೆ. ಬಿಸಿಲಿನ ಪ್ರಭಾವ ಕಂಡು ಜನರು ಹೈರಾಣಾಗಿದ್ದಾರೆ. ಇದೀಗ ಬಿಸಿಲಿನ ತಾಪಮಾನದ ಕಾರಣಕ್ಕಾಗಿ ಕಿತ್ತೂರು ಕರ್ನಾಟಕದ ಎರಡು ಜಿಲ್ಲೆಗಳು, ಕಲ್ಯಾಣ ಕರ್ನಾಟಕದ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ಸಮಯ ಬದಲಾವಣೆ ಮಾಡಲಾಗಿದೆ.
ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳು ಹಾಗೂ ಕಿತ್ತೂರು ಕರ್ನಾಟಕದ 2 ಜಿಲ್ಲೆಗಳು ಸೇರಿದಂತೆ ಒಟ್ಟು 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಬೆಳಗ್ಗೆ 8ರಿಂದ ಮಧ್ಯಾಹ್ನ 1:30ರ ತನಕ ಸರ್ಕಾರಿ ಕಚೇರಿಗಳ ಕೆಲಸದ ಸಮಯ ನಿಗದಿ ಮಾಡಿದ್ದು, ಏಪ್ರಿಲ್, ಮೇ ತಿಂಗಳ ಅಂತ್ಯದ ತನಕವೂ ಸರ್ಕಾರಿ ಕಚೇರಿ ಸಮಯ ಬದಲಾವಣೆ ಜಾರಿಯಲ್ಲಿ ಇರಲಿದೆ.
ಕಲಬುರಗಿ, ಬೀದರ್, ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ ಆಗಲಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿ ಮೇರೆಗೆ ಸರ್ಕಾರದ ಆದೇಶ ಹೊರಬಿದ್ದಿದೆ.
8 ಜಿಲ್ಲೆಗಳಲ್ಲಿ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ತಮ್ಮ ಕರ್ತವ್ಯವನ್ನು ಎಂದಿನಂತೆ ಯಾವುದೇ ಲೋಪ/ಅಡೆತಡೆಯಿಲ್ಲದೆ ಕರ್ತವ್ಯ ನಿರ್ವಹಿಸತಕ್ಕದ್ದು. ಸಾರ್ವಜನಿಕರಿಗೆ ಯಾವುದೇ ರೀತಿ ಅನಾನುಕೂಲ ಆಗದಂತೆ ಮತ್ತು ಜಿಲ್ಲಾಧಿಕಾರಿಗಳು/ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಕರ್ತವ್ಯ ನಿರ್ವಹಿಸತಕ್ಕದ್ದು ಎಂಬ ಷರತ್ತನ್ನು ಸಹ ಹಾಕಲಾಗಿದೆ.