ಬೆಂಗಳೂರು:- ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಗೆ ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರುನಾಡಿಗೆ ಕೊರೋನಾ ಆತಂಕ: ಸಾರ್ವಜನಿಕರಿಗೆ ವಿಶೇಷ ಸೂಚನೆ ಕೊಟ್ಟ ಆರೋಗ್ಯ ಇಲಾಖೆ!
2000ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ರೂಪಾ ಅವರನ್ನು ಐಜಿಪಿಯಿಂದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕಿಯಾಗಿ (ಎಡಿಜಿಪಿ) ಸರ್ಕಾರವು ಮುಂಬಡ್ತಿ ನೀಡಿದೆ. ಮುಂದಿನ ಆದೇಶದವರೆಗೂ ಸದ್ಯ ಕಾರ್ಯನಿರ್ವಹಿಸುತ್ತಿರುವ ಹುದ್ದೆಯಲ್ಲಿ ಮುಂದುವರಿಯುವಂತೆ ಸೂಚಿಸಿದೆ.
ಮುಂಬಡ್ತಿ ಸಂಬಂಧ ಡಿ. ರೂಪಾ ಅವರು ಏಪ್ರಿಲ್ 25 ರಂದು ನ್ಯಾಯಾಲಯದ ಮೆಟ್ಟಿಲೇರಿದ್ದರು. ನ್ಯಾಯವಾಗಿ ತಮಗೆ ಸಿಗಬೇಕಾದ ಬಡ್ತಿ ನೀಡುವ ಕುರಿತು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ನ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವು, “ಮುಂಬಡ್ತಿ ಸಂಬಂಧ ಹೊಸದಾಗಿ ಅರ್ಜಿ ಸಲ್ಲಿಸುವಂತೆ ರೂಪಾ ಅವರಿಗೆ ಸೂಚಿಸಿತ್ತು. ಇದೇ ವೇಳೆ, ಮನವಿ ಸಂಬಂಧ ಸರ್ಕಾರವು ಎಂಟು ವಾರಗಳಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು” ಎಂದು ಆದೇಶಿಸಿ ಅರ್ಜಿಯನ್ನು ಇತ್ಯರ್ಥಪಡಿಸಿತ್ತು.
ಹೈಕೋರ್ಟ್ನ ಗಡುವಿಗೆ ಮಣಿದ ಸರ್ಕಾರ ಡಿ. ರೂಪಾ ಅವರಿಗೆ ಮುಂಬಡ್ತಿ ನೀಡಿ ಆದೇಶ ಹೊರಡಿಸಿದೆ