ಮಂಡ್ಯ: ಪಹಲ್ಗಾಮ್ ನಲ್ಲಿ ಉಗ್ರರು 26 ಮಂದಿ ಪ್ರವಾಸಿಗರನ್ನು ಬಲಿ ಪಡೆದಿದ್ದಕ್ಕೆ ಪ್ರತಿಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂದೂರ್ ಕಾರ್ಯಾಚರಣೆ ಮೂಲಕ ಪಾಕಿಸ್ತಾನದಲ್ಲಿ ಉಗ್ರರ ನೆಲೆಗಳ ಮೇಲೆ ಕ್ಷೀಪಣಿ ದಾಳಿ ನಡೆಸಿ ಧ್ವಂಸಗೊಳಿಸಿದ್ದು, ಕಾರ್ಯಾಚರಣೆಯಲ್ಲಿಹಲವು ಉಗ್ರರು ಸಾವನ್ನಪ್ಪಿದ್ದಾರೆ. ಇದೀಗ ಉಗ್ರರ ದಾಳಿ ಭೀತಿ ಹಿನ್ನೆಲೆ ದೇಶಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು ರಾಜ್ಯದಲ್ಲೂ ಕೂಡ ಕಟ್ಟೆಚ್ಚರ ವಹಿಸಲಾಗಿದೆ.
ಈ ಕುರಿತಾಗಿ ಮಂಡ್ಯದ ಮದ್ದೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಗ್ರರ ದಾಳಿ ಭೀತಿ ಹಿನ್ನೆಲೆಯಲ್ಲಿ, ಕರ್ನಾಟಕ ಕೂಡ ಅಲರ್ಟ್ ಆಗಿದ್ದು, ರಾಜ್ಯದ ಪ್ರಮುಖ ಜಲಾಶಯಗಳಿಗೆ ಹೆಚ್ಚಿನ ಭದ್ರತೆ ಹೆಚ್ಚಿಸಲಾಗಿದೆ. ಕರಾವಳಿ ಪ್ರದೇಶ, ಜನನಿಬಿಡ ಪ್ರದೇಶ ಸೇರಿದಂತೆ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಹೀಗಾಗಿ ಹೆಚ್ಚಿನ ನಿಗಾ ವಹಿಸಲು ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದ್ದು, ಈ ನಿಟ್ಟಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದರು.
ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರಲು ನೀರಿಗೆ ಒಂದು ಚಿಟಿಕೆ ಈ ಪುಡಿ ಹಾಕಿ ಕುಡಿಯಿರಿ.. ಆಮೇಲೆ ರಿಸಲ್ಟ್ ನೋಡಿ!
ನಮ್ಮ ದೇಶದ ಸೈನಿಕರ ಕ್ಷೇಮಕ್ಕಾಗಿ ಮತ್ತು ಮುಂದೆ ನಡೆಯುವ ಯುದ್ದದಲ್ಲಿ ಭಾರತೀಯ ಸೈನಿಕರಿಗೆ ಗೆಲುವು ಸಿಗಲಿ, ಯಾವುದೇ ಪ್ರಾಣಾಪಾಯಗಳು ಆಗದಿರಲಿ ಎಂದು ಸರ್ಕಾರದಿಂದ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಲಿ ಆದೇಶ ಮಾಡಲಾಗಿದೆ ಎಂದು ಹೇಳಿದರು.
ಪಾಕಿಸ್ತಾನದ ಪ್ರಜೆಗಳನ್ನು ಆಯಾ ರಾಜ್ಯ ಸರ್ಕಾರಗಳು 48 ಗಂಟೆಯೊಳಗೆ ದೇಶದಿಂದ ಗಡಿಪಾರು ಮಾಡಬೇಕೆಂಬ ಆದೇಶವಿದ್ದರೂ ಸಹ ರಾಜ್ಯದಲ್ಲಿ ಇನ್ನು ಹಲವರು ವಾಸವಾಗಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿರುವ ಕೆಲ ಪಾಕಿಸ್ತಾನಿ ಪ್ರಜೆಗಳು ನ್ಯಾಯಾಲಯದ ಮೊರೆ ಹೋಗಿದ್ದಾರೆ ಹೀಗಾಗಿ ಅವರನ್ನು ಗಡಿಪಾರು ಮಾಡಲು ಸಾಧ್ಯವಿಲ್ಲ, ನ್ಯಾಯಾಲಯದ ಆದೇಶದ ಬಳಿಕ ಗಡಿಪಾರು ಮಾಡಲಾಗುವುದು ಎಂದು ತಿಳಿಸಿದರು. ಇನ್ನು ಕೇಂದ್ರ ಸರ್ಕಾರ ಹೊರಡಿಸುವ ಸಲಹೆ ಸೂಚನೆಗಳನ್ನು ಪಾಲಿಸಲಾಗುತ್ತಿದ್ದು, ತೀವ್ರ ಕಟ್ಟೆಚ್ಚರ ವಹಿಸಲಾಗುತ್ತಿದೆ ಎಂದರು.
ವರದಿ : ಗಿರೀಶ್ ರಾಜ್ ಮಂಡ್ಯ