ಬೆಂಗಳೂರು: ಆಪರೇಷನ್ ಸಿಂಧೂರ್ ಬಗ್ಗೆ ಕೋಲಾರದ ಶಾಸಕ ಕೊತ್ತೂರು ಮಂಜುನಾಥ್ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ನಾಗರಿಕ ಹೋರಾಟ ಸಮಿತಿಯ ಉಪಾಧ್ಯಕ್ಷ ಗಣೇಶ್ ರಾವ್ ಅವರು ಕೊತ್ತೂರು ಮಂಜುನಾಥ್ ವಿರುದ್ಧ ದೂರು ದಾಖಲಿಸಿದ್ದು, ಕ್ರಮಕ್ಕಾಗಿ ಆಗ್ರಹಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂದೂರ್ ಕಾರ್ಯಾಚರಣೆ ನಡೆಸಿದೆ. ಈ ಆಪರೇಷನ್ ಸಿಂದೂರ್ ಕಾರ್ಯಾಚರಣೆ ಮೂಲಕ ಭಾರತೀಯ ಸೇನೆ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ.
ಕಿಡ್ನಿ ಸ್ಟೋನ್ ನೋವಿಲ್ಲದೇ ಕರಗಿ ಹೋಗ್ಬೇಕಾ!? ಹಾಗಿದ್ರೆ ಖಾಲಿ ಹೊಟ್ಟೆಯಲ್ಲಿ ಈ ಜ್ಯೂಸ್ ಕುಡಿರಿ, ರಿಸಲ್ಟ್ ಗ್ಯಾರಂಟಿ!
ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ 100 ಮಂದಿ ಉಗ್ರರು ಹತರಾಗಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಆದರೆ, ಈ ಆಪರೇಷನ್ ಸಿಂದೂರ್ ಕಾರ್ಯಾಚರಣೆ ಕುರಿತು ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದರು.
ತಮ್ಮ ಮಾತುಗಳ ಮೂಲಕ 140 ಕೋಟಿ ಭಾರತೀಯರ ಭಾವನೆಗಳಿಗೆ ದಕ್ಕೆ ತಂದಿರುವ ಹಾಗೂ ಬಹಿರಂಗವಾಗಿ ಭಾರತ ದೇಶ ಮತ್ತು ಭಾರತೀಯ ಸೇನೆಗೆ ಅವಮಾನಕರ ಮಾತುಗಳನ್ನಾಡಿದ್ದಾರೆ.
ಹೀಗಾಗಿ ಶಾಸಕ ಕೊತ್ತೂರು ಮಂಜುನಾಥ್ ಅವರ ವಿರುದ್ಧ ಕೂಡಲೇ ದೇಶದ್ರೋಹದ ಪ್ರಕರಣ ಮತ್ತು ಕ್ರಿಮಿನಲ್ ಪ್ರಕರಣವನ್ನು ದಾಖಲಿಸಬೇಕು. ಇದಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ದಾಖಲೆಗಳ ಸಹಿತ ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.