ಬೆಂಗಳೂರು:- ಮನೆಗಳಿಗೆ ಸ್ಟಿಕ್ಕರ್ ಅಂಟಿಸುವುದು ಸಮೀಕ್ಷಾ ಪ್ರಕ್ರಿಯೆಯ ಭಾಗ ಎಂದು ಬಿಬಿಎಂಪಿ ಸ್ಪಷ್ಟನೆ ಕೊಟ್ಟಿದೆ.
ಭದ್ರಾ ಬಲದಂಡೆ ನಾಲೆ ಕೊನೆ ಭಾಗದ ರೈತರ ಮನವಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಕಾರಾತ್ಮಕ ಸ್ಪಂದನೆ!
ಕರ್ನಾಟಕದಾದ್ಯಂತ ಮತ್ತೊಮ್ಮೆ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ನಡೆಯುತ್ತಿದೆ. ಆದರೆ ಅಧಿಕಾರಿಗಳು ಸಮೀಕ್ಷೆ ಮಾಡದೆ ಮನೆಗಳಿಗೆ ಕೇವಲ ಸ್ಟಿಕ್ಕರ್ ಅಂಟಿಸಿ ಹೋಗುತ್ತಿರುವುದಾಗಿ ಸ್ವತಃ ಜನರೇ ದೂರಿದ್ದರು. ಇದೀಗ ಈ ವಿಚಾರವಾಗಿ ಬಿಬಿಎಂಪಿ ಸ್ಪಷ್ಟೀಕರಣ ನೀಡಿದೆ.
ಈ ಕುರಿತಾಗಿ ಬಿಬಿಎಂಪಿ ಟ್ವೀಟ್ ಮಾಡಿದ್ದು, ಕರ್ನಾಟಕ ಸರ್ಕಾರವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ, ಬೆಂಗಳೂರು ನಗರದಾದ್ಯಂತ ಪರಿಶಿಷ್ಟ ಜಾತಿ(SC) ಸಮಗ್ರ ಸಮೀಕ್ಷೆಯನ್ನು ನಡೆಸುತ್ತಿದೆ. ಈ ಸಮೀಕ್ಷೆಯು ಪ್ರತಿ ಅರ್ಹ ಕುಟುಂಬವನ್ನು ಒಳಗೊಂಡಿದೆಯೇ ಎಂದು ಖಚಿತಪಡಿಸಿಕೊಳ್ಳುವ ಗುರಿ ಹೊಂದಿದೆ. ಸಮೀಕ್ಷಾ ತಂಡಗಳು ನಿವಾಸಿಗಳೊಂದಿಗೆ ಸಂವಹನ ನಡೆಸದೆ ಮನೆಗಳ ಮೇಲೆ ಸಮೀಕ್ಷೆಯ ಸ್ಟಿಕ್ಕರ್‌ಗಳನ್ನು ಅಂಟಿಸಿವೆ ಎಂದು ಕೆಲವು ನಿವಾಸಿಗಳು, ಸಾಮಾಜಿಕ ಮಾಧ್ಯಮ, ಟಿವಿ ಸುದ್ದಿ ವಾಹಿನಿಗಳು ಮತ್ತು ನಮ್ಮ ಸಹಾಯವಾಣಿಯಲ್ಲಿ ಕಳವಳ ವ್ಯಕ್ತಪಡಿಸಿರುವುದನ್ನು ಗಮನಿಸಲಾಗಿದೆ.
ಸಂವಹನದ ಅಗತ್ಯತೆ: ಮನೆಯ ಸದಸ್ಯರೊಂದಿಗೆ ಸಂವಹನ ನಡೆಸದೆ ಸ್ಟಿಕ್ಕರ್‌ಗಳನ್ನು ಅಂಟಿಸಬಾರದು ಎಂದು ಸಮೀಕ್ಷಾ ತಂಡಗಳಿಗೆ ಸ್ಪಷ್ಟವಾಗಿ ಸೂಚನೆ ನೀಡಲಾಗಿದೆ. ಆದಾಗ್ಯೂ, ಕೆಲ ಸಂದರ್ಭಗಳಲ್ಲಿ ಇದನ್ನು ಅನುಸರಿಸದಿರಬಹುದು ಎಂದು ನಾವು ಒಪ್ಪಿಕೊಳ್ಳುತ್ತೇವೆ. ಸಮೀಕ್ಷೆ ನಡೆಸಿದ ಲಕ್ಷಾಂತರ ಮನೆಗಳಲ್ಲಿ, ಕೆಲವು ಮನೆಗಳು ನಮ್ಮ ಸಮೀಕ್ಷಕರಿಂದ ತಪ್ಪಿಹೋಗಿರಬಹುದು.
ಸಂವಹನ ನಡೆಯದಿದ್ದಲ್ಲಿ ಏನು ಮಾಡಬೇಕು? ಯಾವುದೇ ಸಂವಹನವಿಲ್ಲದೆ ಸ್ಟಿಕ್ಕರ್ ಅಂಟಿಸಿದ್ದರೆ, ದಯವಿಟ್ಟು ನಮ್ಮ ಸಹಾಯವಾಣಿ ಸಂಖ್ಯೆ 9481359000ಗೆ ಕರೆ ಮಾಡಿ (ಸಂಖ್ಯೆಯು ಸ್ಟಿಕ್ಕರ್‌ನ ಮೇಲೆ ಮುದ್ರಿತವಾಗಿರುತ್ತದೆ) ಸಮೀಕ್ಷೆಯನ್ನು ಸರಿಯಾಗಿ ಪೂರ್ಣಗೊಳಿಸಲು ಅಗತ್ಯ ವ್ಯವಸ್ಥೆ ಮಾಡುತ್ತೇವೆ.
ಸ್ವಯಂ ಘೋಷಣೆಯ ಆಯ್ಕೆ: ಇನ್ನು ಸಮೀಕ್ಷೆಗೆ ಒಳಪಡದ ಯಾವುದೇ ಪರಿಶಿಷ್ಟ ಜಾತಿ ಕುಟುಂಬವು ಆನ್‌ಲೈನ್‌ನಲ್ಲಿ ಸ್ವಯಂ ಘೋಷಣಾ ಫಾರ್ಮ್ ಅನ್ನು ಭರ್ತಿ ಮಾಡುವ ಮೂಲಕ ಸಮೀಕ್ಷೆಯಲ್ಲಿ ಭಾಗವಹಿಸಬಹುದು. ಲಿಂಕ್ ಅನ್ನು ಪ್ರವೇಶಿಸಲು ಮತ್ತು ನಿಮ್ಮ ಮಾಹಿತಿಯನ್ನು ಸಲ್ಲಿಸಲು ಸ್ಟಿಕ್ಕರ್‌ನಲ್ಲಿರುವ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಬಹುದಾಗಿದೆ.