Close Menu
Ain Live News
    Facebook X (Twitter) Instagram YouTube
    Thursday, June 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಯಾರೇ ಆಗಲಿ ಕೋಮುಭಾವನೆ ಕೆಡಿಸೋ ಹೇಳಿಕೆ ನೀಡಿದ್ರೆ ನಿರ್ದಾಕ್ಷಿಣ್ಯ ಕ್ರಮ: ಗೃಹ ಸಚಿವ ಪರಮೇಶ್ವರ್!

    By AIN AuthorMay 3, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:-ಯಾರೇ ಆಗಲಿ ಕೋಮುಭಾವನೆ ಕೆಡಿಸೋ ಹೇಳಿಕೆ ನೀಡಿದ್ರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

    ಪಾಕ್ ನಿಂದ ಬರುವ ಎಲ್ಲಾ ಆಮದುಗಳಿಗೆ ನಿರ್ಬಂಧ ವಿಧಿಸಿದ ಭಾರತ: ಗಡಿಯಲ್ಲಿ ಉದ್ವಿಗ್ನ ಸ್ಥಿತಿ!

    ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕೋಮುಗಲಭೆ ನಿಗ್ರಹಕ್ಕೆ ಕರಾವಳಿಯಲ್ಲಿ ಆ್ಯಂಟಿ ಕಮ್ಯುನಲ್ ಟಾಸ್ಕ್ ಫೋರ್ಸ್ ರಚನೆ ಮಾಡುತ್ತೇವೆ. ಹೀಗಾಗಲೇ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯಲ್ಲಿ ಭಾಗಿಯಾದ 8 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯನ್ನು ಜನಸಮುದಾಯ ಇಷ್ಟ ಪಡೋದಿಲ್ಲ. ಸುಹಾಸ್ ಹಾಗೂ ಅಶ್ರಫ್ ಕೊಲೆಯಿಂದ ಜಿಲ್ಲೆಯ ಕೋಮುಸೌಹಾರ್ದಕ್ಕೆ ಧಕ್ಕೆಯಾಗಿದೆ. ಸುಹಾಸ್ ಕೊಲೆಯಲ್ಲಿ 8 ಜನ, ಅಶ್ರಫ್ ಕೊಲೆಯಲ್ಲಿ 21 ಜನ ಆರೋಪಿಗಳನ್ನು ಬಂಧಿಸಿದ್ದೇವೆ. ಯಾರನ್ನೂ ಕಾನೂನು ಉಲ್ಲಂಘನೆ ಮಾಡಲು ಬಿಡೋದಿಲ್ಲ ಎಂದು ಹೇಳಿದರು

    ಅವರನ್ನ ಹತ್ತಿಕ್ಕಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ದಕ್ಷಿಣ ಕನ್ನಡ ಜಿಲ್ಲೆ ಶಾಂತಿಯಿಂದ ಇರಬೇಕು. ಹಿಂದೆ ಈ ಜಿಲ್ಲೆಯಲ್ಲೂ ಶಾಂತಿಗಾಗಿ ನಾವು ಪಾದಯಾತ್ರೆ ನಡೆಸಿದ್ದೆವು. ಸರ್ಕಾರ ಒಂದು ತೀರ್ಮಾನಕ್ಕೆ ಬಂದಿದೆ. ಇನ್ಮುಂದೆ ಇಂತಹ ಘಟನೆಗಳು ಮರುಕಳಿಸಬಾರದೆಂದು ನಾವು ಹೊಸದಾಗಿ ಒಂದು ಆ್ಯಂಟಿ ಕಮ್ಯುನಲ್ ಫೋರ್ಸ್ನ್ನು ಪ್ರತ್ಯೇಕವಾಗಿ ಮಾಡ್ತೇವೆ. ಆ್ಯಂಟಿ ನಕ್ಸಲ್ ಫೋರ್ಸ್ನಂತೆ ಪ್ರತ್ಯೇಕವಾಗಿ ಈ ಕೋಮುವಾದ ನಿಗ್ರಹ ಪಡೆ ಕೆಲಸ ಮಾಡುತ್ತೆ ಎಂದು ಮಾಹಿತಿ ನೀಡಿದರು.

    ಯಾರು ಕೋಮುವಾದದ ಕೆಲಸ ಹಾಗೂ ಹಿಂದಿನಿAದ ಯಾರು ಕೆಲಸ ಮಾಡ್ತಾರೆ ಅಂತಹವರ ವಿರುದ್ಧ ಕ್ರಮಕೈಗೊಳ್ಳಲು ಈ ಫೋರ್ಸ್ಗೆ ಸಂಪೂರ್ಣ ಅನುಮತಿ ನೀಡ್ತೇವೆ. ಈ ಎರಡು ಜಿಲ್ಲೆಗಳಲ್ಲಿ ಈ ಫೋರ್ಸ್ ಕೆಲಸ ಮಾಡ್ತದೆ. ಯಾರು ಈ ಜಿಲ್ಲೆಯಲ್ಲಿ ಕಮ್ಯುನಲ್ ಭಾಷಣ ಮಾಡ್ತಾರೋ ಅವರ ವಿರುದ್ಧವೂ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಅಧಿಕಾರ ನೀಡಿದ್ದೇವೆ. ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಶಾಂತಿಯಿಂದ ಇರಬೇಕು. ಜನರೂ ಇಲ್ಲಿಗೆ ಬರಬೇಕು. ಅದಕ್ಕೆ ಬೇಕಾದ ಎಲ್ಲಾ ಕೆಲಸಗಳನ್ನು ಮಾಡ್ತೇವೆ. ಎರಡು ಜಿಲ್ಲೆಯಲ್ಲಿ ಮಾತ್ರ ಈ ಕೋಮುವಾದ ನಿಗ್ರಹ ಪಡೆ ಕೆಲಸ ಮಾಡ್ತದೆ. ಐಜಿಪಿ ನೇತೃತ್ವದಲ್ಲಿ ಕೆಲಸ ಮಾಡ್ತದೆ ಎಂದು ಸ್ಪಷ್ಟಪಡಿಸಿದರು.

    ಯಾರೇ ಆಗಲಿ ಯಾವುದೇ ಪಕ್ಷವಾಗಲಿ ಯಾವುದೇ ಧರ್ಮದವರಾಗಲಿ ಕೋಮುಭಾವನೆ ಕೆಡಿಸೋ ಹೇಳಿಕೆ ನೀಡಿದ್ರೆ ಕ್ರಮಕೈಗೊಳ್ತೇವೆ. 8 ಆರೋಪಿಗಳು ಏನು ಹೇಳಿಕೆ ನೀಡ್ತಾರೋ ಆಗ ಕೊಲೆಯ ಕಾರಣ ಗೊತ್ತಾಗುತ್ತದೆ ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಬಾಗಲಕೋಟೆ: ಕರಿ ಹರಿವಲ್ಲಿ ಗೊಂದಲ, ಗೋಸೇವಕರಿಂದ ಆಚರಣೆ ಸಂಪನ್ನ!

    June 12, 2025

    ನಿರುದ್ಯೋಗ ನಿವಾರಣೆಗೆ ಕೃಷಿ ಕ್ಷೇತ್ರ ಆಸರೆ: ಸಚಿವ ಎನ್.ಚಲುವರಾಯಸ್ವಾಮಿ.

    June 12, 2025

    ಧೈರ್ಯ ಮತ್ತು ದಿಟ್ಟತನದಿಂದ ಬಾಲ್ಯ ವಿವಾಹದಿಂದ ತಪ್ಪಿಸಿಕೊಂಡ ವಿದ್ಯಾರ್ಥಿನಿ..!

    June 12, 2025

    ಗದಗ ಜಿಲ್ಲೆಯಾದ್ಯಂತ ಮಳೆಗೆ ಹೈರಾಣಾದ ಜನ: ಮನೆಗಳಿಗೆ ನೀರು ನುಗ್ಗಿ ಅವಾಂತರ

    June 12, 2025

    ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಗೆ ಕತ್ತರಿಯಿಂದ ಇರಿತ: ಗಂಭೀರ ಗಾಯ

    June 12, 2025

    ಕೋಲಾರ: ಕಲ್ಲು ಕ್ರಷರ್’ನಲ್ಲಿ ಅವಘಡ – ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

    June 12, 2025

    ರಾತ್ರಿ ಸುರಿದ ಮಳೆ ಮನೆಗೆ ನುಗ್ಗಿದ ನೀರು: ಜನಜೀವನ ಅಸ್ತವ್ಯಸ್ತ

    June 12, 2025

    Kantara: “ಕಾಂತಾರ: ಚಾಪ್ಟರ್ 1′ ಚಿತ್ರತಂಡದ ಮತ್ತೊಬ್ಬ ಕಲಾವಿದ ನಿಧನ..!

    June 12, 2025

    Hubballi Breaking: ಧಾರಾಕಾರ ಮಳೆಗೆ ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿ: ಪೊಲೀಸರಿಂದ ತೀವ್ರ ಶೋಧ!

    June 12, 2025

    ಧಾರವಾಡದಲ್ಲಿ ಭಾರೀ ಮಳೆ: ಅಂಗನವಾಡಿ, ಶಾಲಾಕಾಲೇಜುಗಳಿಗೆ ಇಂದು ರಜೆ ಘೋಷಣೆ!

    June 12, 2025

    ಗದಗ ಕುಂದಗೋಳ ತಾತ್ಕಾಲಿಕ ಬಂದಾಗಿದ್ದ ಬಸ್ ಪುನರಾರಂಭ: ಜನತೆ ಖುಷ್!

    June 12, 2025

    ಮಳೆ ಅವಾಂತರ: 101 ಬಾಗಿಲುಗಳುಳ್ಳ 160 ವರ್ಷಗಳ ಕಟ್ಟಡ ಕುಸಿತ!

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.