ನವದೆಹಲಿ: ಜಮ್ಮು-ಕಾಶ್ಮೀರದ ಅನಂತಪುರ ಜಿಲ್ಲೆಯ ಪಹಲ್ಗಾಮ್ನಲ್ಲಿ ಭಯೋತ್ಪಾದಕರು ನಡೆಸಿದ ದಾಳಿ 26 ಪ್ರವಾಸಿಗರು ಜೀವ ಕಳೆದುಕೊಂಡಿದ್ದಾರೆ. 2019ರ ಪುಲ್ವಾಮಾ ದಾಳಿ ಬಳಿಕ ಅತ್ಯಂತ ರಣ ಭಯಂಕರ ಉಗ್ರರ ದಾಳಿ ಇದಾಗಿದೆ. ಿದೀಗ ಪಹಲ್ಗಾಮ್ ದಾಳಿ ನಂತರ ಸಾವಿರಾರು ಸಂಖ್ಯೆಯ ಪ್ರವಾಸಿಗರು ಜಮ್ಮು ಕಾಶ್ಮೀರದಲ್ಲಿ ಸಿಲುಕಿದ್ದಾರೆ.
ಇವರನ್ನು ಸುರಕ್ಷಿತವಾಗಿ ಕರೆ ತರಲು ಹೆಚ್ಚಿನ ಸಂಖ್ಯೆಯಲ್ಲಿ ವಿಮಾನಗಳನ್ನು ನಿಯೋಜಿಸಬೇಕು ಮತ್ತು ಪ್ರಯಾಣ ರದ್ದುಗೊಳಿಸಿದರೆ ಟಿಕೆಟ್ ಶುಲ್ಕವನ್ನು ಮರುಪಾವತಿಸುವಂತೆ ಸೂಚಿಸಿದೆ.
Helmet Tips: ಹೆಲ್ಮೆಟ್ ಧರಿಸದಿದ್ದರೆ ದಂಡ: ಖರೀದಿಸುವಾಗ ಈ ಸಲಹೆಗಳು ಕಡ್ಡಾಯ!
ಹೆಚ್ಚಿದ ಬೇಡಿಕೆಗೆ ಪ್ರತಿಕ್ರಿಯೆಯಾಗಿ ವಿಮಾನಗಳ ಸಂಖ್ಯೆಯನ್ನು ಹೆಚ್ಚಿಸಲು ಮತ್ತು ಶ್ರೀನಗರದಿಂದ ಭಾರತದಾದ್ಯಂತ ವಿವಿಧ ಸ್ಥಳಗಳಿಗೆ ಪ್ರವಾಸಿಗರನ್ನು ಸ್ಥಳಾಂತರಿಸಲು ಅನುಕೂಲವಾಗುವಂತೆ ವಿಮಾನಯಾನ ಸಂಸ್ಥೆಗಳು ತ್ವರಿತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಡಿಜಿಸಿಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಡಿಜಿಸಿಎ ಸೂಚನೆ ಬೆನ್ನಲ್ಲೇ ಏರ್ ಇಂಡಿಯಾ ಮತ್ತು ಇಂಡಿಗೋ ಬುಧವಾರ ಶ್ರೀನಗರದಿಂದ ಹೆಚ್ಚುವರಿ ವಿಮಾನ ಸೇವೆ ಆರಂಭಿಸಿದೆ. ಈ ಸಂದರ್ಭದಲ್ಲಿ ಲಾಭ ಪಡೆಯಲು ವಿಮಾನಯಾನ ಕಂಪನಿಗಳು ಟಿಕೆಟ್ ದರವನ್ನು ಏರಿಕೆ ಮಾಡಿದರೆ ಆನ್ಲೈನ್ನಲ್ಲಿ ದೂರು ನೀಡುವಂತೆ DGCA ಜನರಲ್ಲಿ ಮನವಿ ಮಾಡಿದೆ.