ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ಸಾಕಷ್ಟು ಆರೋಪಗಳು ಕೇಳಿ ಬರುತ್ತಿದೆ. ಇದೀಗ 40 ವರ್ಷದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅನ್ವಯ ಆರ್‌ಎಮ್‌ಸಿ ಯಾರ್ಡ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಹೌದು 2013ರಲ್ಲಿ ಜೆಪಿ ಪಾರ್ಕ್ ನ ಶಾಸಕರ ಕಚೇರಿಯಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ಆರೋಪ ಮಾಡಿದ್ದಾರೆ ಎನ್ನಲಾಗ್ತಿದೆ. ಅಪರಿಚಿತ ವ್ಯಕ್ತಿಯಿಂದ ಇಂಜೆಕ್ಷನ್ ತರಿಸಿ ಇಂಜೆಕ್ಟ್ ಮಾಡಿಸಿದ್ದರೆಂದು ದೂರಿನಲ್ಲಿ ದಾಖಲಾಗಿದೆ.
ಬಿಯರ್ ಕುಡಿದರೆ ಕಿಡ್ನಿ ಸ್ಟೋನ್ ಆಗುತ್ತಾ? ಎಣ್ಣೆ ಪ್ರಿಯರು ನೋಡಲೇಬೇಕಾದ ಸ್ಟೋರಿ!
ಅತ್ಯಾಚಾರಕ್ಕೂ ಮುನ್ನ ನೀಡಿದ ಇಂಜೆಕ್ಷನ್ನಿಂದ ಈಗ ನನಗೆ ಇಡಿಆರ್ ಎಂಬ ಕಾಯಿಲೆ ಬಂದಿದೆ. ಇದ್ರಿಂದ ಮನನೊಂದ ನಾನು ಆತ್ಮಹತ್ಯೆಗೆ ಯತ್ನಿಸಿದ್ದೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಬಿಜೆಪಿ ಕಾರ್ಯಕರ್ತೆ ನೀಡಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 376D, 270, 323, 354, 504, 506, 509, 34 ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದೆ.
ಈ ಹಿಂದೆ ಬಿಜೆಪಿ ಕಾರ್ಯಕರ್ತೆಯಾಗಿ ಕೆಲಸ ಮಾಡ್ತಿದ್ದೆ. ನನ್ನ ಗಂಡ ಬಿಟ್ಟು ಹೋದ ಬಳಿಕ 2ನೇ ಮದುವೆ ಆಗಿ ಜೀವನ ನಡೆಸುತ್ತಿದ್ದೆ. ವೇಶ್ಯಾವಾಟಿಕೆ ಆರೋಪ ಹೊರಿಸಿ ನನ್ನನ್ನು ಜೈಲಿಗೆ ಕಳಿಸಿದ್ರು. ಬಳಿಕ ಜಾಮೀನು ಪಡೆದು ಹೊರಗೆ ಬಂದಿದ್ದೆ. ಕೆಲವರು ನನ್ನ ಕೇಸ್ ಇತ್ಯರ್ಥ ಮಾಡಿಕೊಡುವುದಾಗಿ ಆಮಿಷವೊಡ್ಡಿ ನನ್ನನ್ನು ಕಚೇರಿಗೆ ಕರೆಸಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ಆರೋಪ ಮಾಡಿದ್ದಾರೆ.
ಈ ಹಿಂದೆ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಷ್ಮಿದೇವಿನಗರ ವಾರ್ಡ್ನ ಡಿ ದೇವರಾಜು ಅರಸು ಟ್ರಕ್ ಟರ್ಮಿನಲ್ ಪ್ರದೇಶದ ಘನ ತ್ಯಾಜ್ಯ ಸಂಗ್ರಹಣ ಮತ್ತು ವಿಲೇವಾರಿ ಗುತ್ತಿಗೆ ಪಡೆದು ಕೆಲಸ ಮಾಡುತ್ತಿದ್ದೆ. ಶಾಸಕ ಮುನಿರತ್ನ 36 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟು ಕಿರುಕುಳ ನೀಡಿದ್ದಾರೆ ಎಂದು ಚಲುವರಾಜು ಆರೋಪಿಸಿದ್ದರು.