ಚಿಕ್ಕಮಗಳೂರು:- ಆಕೆ 15 ವರ್ಷದ ವಿದ್ಯಾರ್ಥಿನಿ. ವಸತಿ ಶಾಲೆಯಲ್ಲೇ ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾಗಿದ್ದಾರೆ. ಬೆಳಿಗ್ಗೆ ಹಾಸ್ಟೆಲ್ ವಿದ್ಯಾರ್ಥಿಗಳು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಕಲಬುರ್ಗಿ ಜೋಳದ ರೊಟ್ಟಿಗೆ ಮೋದಿ ಮೆಚ್ಚುಗೆ: ಮನ್ ಕಿ ಬಾತ್ನಲ್ಲಿ ಹೇಳಿದ್ದೇನು?
ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ವಸತಿ ಶಾಲೆಯ ಹಾಸ್ಟೆಲ್ ನಲ್ಲೇ 15 ವರ್ಷದ ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಶಮಿತಾ ನೇಣಿಗೆ ಶರಣಾದ ವಿದ್ಯಾರ್ಥಿನಿ.
ನಿನ್ನೆ ರಾತ್ರಿ ಅಂದ್ರೆ ಶನಿವಾರ ಶಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಬೆಳಗಿನ ಜಾವ ಮಕ್ಕಳು ಎದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿನಿ 6ನೇ ತರಗತಿಯಿಂದ ವಸತಿ ಶಾಲೆಯಲ್ಲೇ ಓದುತ್ತಿದ್ದಳು. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.