ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಬೇಡಿಕೆ ಈಡೇರುವ ಸಮಯ ಕೊನೆಗೂ ಸನ್ನಿಹಿತವಾಗಿದೆ. ಒಳಮೀಸಲಾತಿ ಕುರಿತಂತೆ ವರದಿ ಸಂಗ್ರಹಿಸಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮತಿ, ರಾಜ್ಯ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಚಿವರುಗಳಾದ ಕೆ.ಹೆಚ್.ಮುನಿಯಪ್ಪ, ಹೆಚ್.ಸಿ. ಮಹದೇವಪ್ಪ, ಆರ್.ಬಿ.ತಿಮ್ಮಾಪುರ್, ಮಾಜಿ ಸಚಿವ ಎಚ್. ಆಂಜನೇಯ, ಶಾಸಕ ಬಸಂತಪ್ಪ ಸೇರಿ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವಿಧಾನಸೌಧದ ಸಿಎಂ ಕಚೇರಿಯಲ್ಲಿ ವರದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನ್ಯಾ. ನಾಗಮೋಹನ್ ದಾಸ್ ವರದಿ ಸಲ್ಲಿಸಿದರು. ಇದು ಮಧ್ಯಂತರ ವರದಯಾಗಿದ್ದು ಪೂರ್ಣ ಪ್ರಮಾಣದ ವರದಿಯಷ್ಟೇ ಬಾಕಿ ಉಳಿದಿದೆ. ಮಧ್ಯಂತರ ವರದಿ ಆಧರಿಸಿ ಇಂದಿನ ಕ್ಯಾಬಿನೆಟ್ ನಲ್ಲಿ ಚರ್ಚೆ ನಡೆಸ ಸರ್ಕಾರ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ.
ಒಳ ಮೀಸಲಾತಿ ಬಗ್ಗೆ ಬದ್ಧತೆ ಇದೆ
ದಲಿತ ಸಮುದಾಯಕ್ಕೆ ಒಳಮೀಸಲಾತಿ ಜಾರಿ ವಿಚಾರದಲ್ಲಿ ಸರ್ಕಾರಕ್ಕೆ ಬದ್ಧತೆ ಇದೆ. ಮೀಸಲಾತಿಯನ್ನ ಸರ್ಕಾರ ಜಾರಿ ಮಾಡುತ್ತೆ ಅಂತ ಸಚಿವ ಆರ್.ಬಿ ತಿಮ್ಮಾಪುರ ಹೇಳಿದ್ದಾರೆ. ಈ ವಿಚಾರದಲ್ಲಿ ಒಳಪಂಗಡಗಳಲ್ಲಿ ಯಾವುದೇ ಬೇಸರ ಇಲ್ಲ. ನಮ್ಮ ಸಂಪೂರ್ಣ ಸಹಮತ ಇದೆ.
ವರದಿಯನ್ನು ವೈಜ್ಞಾನಿಕವಾಗಿ ಪರಿಶೀಲನೆ ಮಾಡಲಾಗುವುದು. ಎಷ್ಟೋ ವರ್ಷಗಳಿಂದ ಸಮಾಜಕ್ಕೆ, ಸಮುದಾಯಕ್ಕೆ ಅನ್ಯಾಯ ಆಗ್ತಿದೆ ಎಂದಿದ್ದಾರೆ.