ಬೆಂಗಳೂರು: ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 10 ದಿನಗಳ ಬಳಿಕ ಆರೋಪಿಯನ್ನು ಬಂಧಿಸಿದ್ದಾರೆ. ಸಂತೋಷ್ ಡೇನಿಯಲ್ ಬಂಧಿತ ಆರೋಪಿಯಾಗಿದ್ದು, ಬೆಂಗಳೂರಿನ ಶೋರೂಮ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಕಳೆದ ಏಪ್ರಿಲ್ 3ರ ಮಧ್ಯರಾತ್ರಿ ಬೆಂಗಳೂರಿನ ಬಿಟಿಎಂ ಲೇಔಟ್ನ ಓಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಹಿಂದಿನಿಂದ ತಬ್ಬಿಕೊಂಡು ಯುವಕ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದ. ಈತನಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು.
ಹುಡುಗಿಯರೇ ನೀವು ಕೂಡ ಮೆಡಿಮಿಕ್ಸ್ ಸೋಪ್ ಬಳಸ್ತಿದ್ದೀರಾ? ಇದು ಖಂಡಿತ ನಿಮಗಲ್ಲ!
ಘಟನೆ ಸಂಬಂಧ ಪ್ರಕರಣದ ದಾಖಲಿಸಿಕೊಂಡಿದ್ದ ಪೊಲೀಸರು ಬೀದಿ ಕಾಮಣ್ಣನಿಗಾಗಿ ತೀವ್ರ ಹುಡುಕಾಟ ನಡೆಸಿದ್ದರು. 4 ವಿಶೇಷ ತಂಡಗಳನ್ನು ರಚಿಸಿ ಆರೋಪಿ ಮತ್ತು ಸಂತ್ರಸ್ತ ಯುವತಿಯ ಪತ್ತೆಗೆ ಇಳಿದಿದ್ದರು. ತನಿಖೆ ವೇಳೆ ಸುಮಾರು 700 ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದರು. ಕೊನೆಗೆ ಕೇರಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೃತ್ಯ ಎಸಗಿದ ಬಳಿಕ ಆರೋಪಿ ತಮಿಳುನಾಡಿನ ಹೊಸೂರಿಗೆ ಪರಾರಿಯಾಗಿದ್ದ, ನಂತರ ಸೇಲಂ, ಬಳಿಕ ಕೇರಳದ ಕೋಝಿಕೋಡ್ಗೆ ಪರಾರಿಯಾಗಿದ್ದ. ಕೊನೆಗೆ ಕೇರಳದ ಹಳ್ಳಿಯೊಂದರಲ್ಲಿ ಸಿಕ್ಕಿಬಿದ್ದಿದ್ದಾನೆ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಕೋರಮಂಗಲ ನ್ಯಾಯಾಧೀಶರ ನಿವಾಸಕ್ಕೆ ಹಾಜರು ಪಡಿಸಿ ಕಸ್ಟಡಿಗೆ ಪಡೆದುಕೊಳ್ಳಲು ಸಿದ್ಧತೆ ನಡೆಸಿದ್ದಾರೆ.